ಬೀಜಿಂಗ್: ನವದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗದಲ್ಲಿ ಚೀನಾ ಅಧ್ಯಕ್ಷ ಷಿ-ಜಿನ್‌ಪಿಂಗ್ ಪಾಲ್ಗೊಳ್ಳುವುದಿಲ್ಲ. ಪ್ರಧಾನಿ ಲಿ ಕ್ವಿಯಾಂಗ್ ಅವರ ನೇತೃತ್ವದ ನಿಯೋಗ ಭಾಗವಹಿಸಲಿದೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.
ಬೀಜಿಂಗ್: ನವದೆಹಲಿಯಲ್ಲಿ ನಡೆಯಲಿರುವ ಜಿ-20 ಶೃಂಗದಲ್ಲಿ ಚೀನಾ ಅಧ್ಯಕ್ಷ ಷಿ-ಜಿನ್‌ಪಿಂಗ್ ಪಾಲ್ಗೊಳ್ಳುವುದಿಲ್ಲ. ಪ್ರಧಾನಿ ಲಿ ಕ್ವಿಯಾಂಗ್ ಅವರ ನೇತೃತ್ವದ ನಿಯೋಗ ಭಾಗವಹಿಸಲಿದೆ ಎಂದು ವಿದೇಶಾಂಗ ಸಚಿವಾಲಯ ಸೋಮವಾರ ತಿಳಿಸಿದೆ.
ಭಾರತ ಸರ್ಕಾರದ ಆಹ್ವಾನದ ಮೇರೆಗೆ ಸೆಪ್ಟೆಂಬರ್ 9 ಮತ್ತು 10ರಂದು ನಡೆಯಲಿರುವ 18ನೇ ಜಿ-20 ಶೃಂಗಸಭೆಯಲ್ಲಿ ಪ್ರಧಾನಿ ಲಿ ಕ್ವಿಯಾಂಗ್ ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಇಲಾಖೆ ವಕ್ತಾರ ಮಾಯೊ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಷಿ-ಜಿನ್ ಪಿಂಗ್ ಅವರು ಗೈರು ಆಗುತ್ತಿರುವುದಕ್ಕೆ ಅವರು ಕಾರಣ ಬಹಿರಂಗಪಡಿಸಿಲ್ಲ. ಆಗ್ನೇಯ ಏಷ್ಯಾ ರಾಷ್ಟ್ರಗಳ ಒಕ್ಕೂಟ (ಆಸಿಯಾನ್) ಮತ್ತು ಪೂರ್ವ ಏಷ್ಯಾ ಶೃಂಗಕ್ಕೂ ಜಿನ್‌ಪಿಂಗ್ ಗೈರಾಗಿದ್ದರು.
ಅಮೆರಿಕ ಅಧ್ಯಕ್ಷ ಜೋ ಬೈಡನ್, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸೇರಿದಂತೆ ಅನೇಕ ಜಾಗತಿಕ ನಾಯಕರು ಶೃಂಗದಲ್ಲಿ ಭಾಗಿಯಾಗಲಿದ್ದಾರೆ.
ಬೈಡನ್ ಸೆ. 7ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಸೆ.8ರಂದು ಭಾರತ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಚರ್ಚೆ ನಡೆಸಲಿದ್ದಾರೆ.
ಭಾರತ ಪ್ರವಾಸವನ್ನು ಎದುರು ನೋಡುತ್ತಿರುವುದಾಗಿ ಹೇಳಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, ಷಿ-ಜಿನ್‌ಪಿಂಗ್ ಗೈರಾಗುತ್ತಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.