ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯನ್ನು ಆಯೋಜಿಸಲು ರಾಷ್ಟ್ರ ರಾಜಧಾನಿ ನವದೆಹಲಿ ಮದುವಣಗಿತ್ತಿಯಂತೆ ಸಜ್ಜಾಗಿದೆ. 25ಕ್ಕೂ ಹೆಚ್ಚು ದೇಶದ ನಾಯಕರು ಮತ್ತು ಪ್ರತಿನಿಧಿಗಳ ಉಪಸ್ಥಿತಿಗೆ ಸಭೆ ಸಾಕ್ಷಿಯಾಗಲಿದೆ.
ನವದೆಹಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 18ನೇ ಜಿ-20 ಶೃಂಗಸಭೆಯನ್ನು ಆಯೋಜಿಸಲು ರಾಷ್ಟ್ರ ರಾಜಧಾನಿ ನವದೆಹಲಿ ಮದುವಣಗಿತ್ತಿಯಂತೆ ಸಜ್ಜಾಗಿದೆ. 25ಕ್ಕೂ ಹೆಚ್ಚು ದೇಶದ ನಾಯಕರು ಮತ್ತು ಪ್ರತಿನಿಧಿಗಳ ಉಪಸ್ಥಿತಿಗೆ ಸಭೆ ಸಾಕ್ಷಿಯಾಗಲಿದೆ.
ಜೋ ಬೈಡನ್ ಜೊತೆ ಅಮೆರಿಕಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್, ಸಿಬ್ಬಂದಿ ಉಪ ಮುಖ್ಯಸ್ಥ ಜೆನ್ ಒ'ಮ್ಯಾಲಿ ದಿಲ್ಲನ್ ಮತ್ತು ಓವಲ್ನ ನಿರ್ದೇಶಕರು ಸೇರಿದಂತೆ ಏರ್ ಫೋರ್ಸ್ ಒನ್ನ ಪ್ರಮುಖ ವ್ಯಕ್ತಿಗಳು ಆಗಮಿಸಿದ್ದಾರೆ.
ಜನ್ಮದಿನ ಆಚರಿಸಿಕೊಳ್ಳುವವರಿಗೆ ವಂಡರ್ಲಾದಲ್ಲಿ ಉಚಿತ ಟಿಕೆಟ್; ಇಲ್ಲಿದೆ ವಿವರ..
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಫೈಟರ್ ಜೆಟ್ ಇಂಜಿನ್ಗಳ ಒಪ್ಪಂದ, 6ಜಿ ನೆಟ್ವರ್ಕ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳ ಕುರಿತು ಚರ್ಚಿಸುತ್ತಾರೆ ಎಂದು ವರದಿಯಾಗಿದೆ.
ಸೆಪ್ಟೆಂಬರ್ 10ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು G20 ಪ್ರೆಸಿಡೆನ್ಸಿ ಬ್ಯಾಟನ್ಅನ್ನು ಬ್ರೆಜಿಲ್ ಅಧ್ಯಕ್ಷ ಲುಲಾ ಅವರಿಗೆ ಹಸ್ತಾಂತರಿಸಲಿದ್ದಾರೆ. ಅಧಿಕೃತವಾಗಿ ಬ್ರೆಜಿಲ್ನ G20 ಪ್ರೆಸಿಡೆನ್ಸಿಯ ಅವಧಿ ಡಿಸೆಂಬರ್ 1ರಿಂದ ಪ್ರಾರಂಭವಾಗಲಿದೆ.