ನವದೆಹಲಿ: ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಶನಿವಾರ ನಡೆಯಲಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನ ನೀಡಲಾಗಿದೆ.
ನವದೆಹಲಿ: ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಎಚ್.ಡಿ.ದೇವೇಗೌಡ ಅವರಿಗೆ ಶನಿವಾರ ನಡೆಯಲಿರುವ ಜಿ 20 ಶೃಂಗಸಭೆಯ ಔತಣಕೂಟಕ್ಕೆ ಆಹ್ವಾನ ನೀಡಲಾಗಿದೆ.
ಭಾರತದ ಅಧ್ಯಕ್ಷತೆಯಲ್ಲಿ ದೆಹಲಿಯ 'ಭಾರತ್ ಮಂಟಪ'ದಲ್ಲಿ ಶನಿವಾರ ಮತ್ತು ಭಾನುವಾರ ಜಿ20 ಶೃಂಗಸಭೆ ನಡೆಯುತ್ತಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಸಮ್ಮುಖದಲ್ಲಿ ಈ ಔತಣಕೂಟ ನಡೆಯಲಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಲಾಗಿದೆ.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್, ತಮಿಳುನಾಡಿನ ಎಂ.ಕೆ.ಸ್ಟಾಲಿನ್, ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, ಜಾರ್ಖಂಡ್‌ನ ಹೇಮಂತ್ ಸೊರೆನ್, ಪಂಜಾಬ್‌ನ ಭಗವಂತ್ ಮಾನ್ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ಅವರಿಗೂ ಔತಣಕೂಟಕ್ಕೆ ಆಹ್ವಾನ ನೀಡಲಾಗಿದೆ. ಅವರು ಕೂಡ ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಆಮಂತ್ರಣ ಪತ್ರಿಕೆಯಲ್ಲಿ 'ಇಂಡಿಯಾ ಬದಲು ಭಾರತ್' ಪದ ಬಳಕೆ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕೇಂದ್ರದ ಆಡಳಿತಾರೂಢ ಬಿಜೆಪಿ ರಾಜಕೀಯ ಲಾಭಕ್ಕಾಗಿ ಭಾರತವನ್ನು ಮರುನಾಮಕರಣ ಮಾಡಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಆರೋಪಿಸಿವೆ.