ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ ನೀಡುವ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.
ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಭಾರತದ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ ನೀಡುವ ಪ್ರಸ್ತಾಪವನ್ನು ಅಂಗೀಕರಿಸಲಾಯಿತು.
ಭಾರತದ ಅಧ್ಯಕ್ಷತೆಯಲ್ಲಿ ಜಿ20 ಶೃಂಗಸಭೆ ಮಹತ್ತರ ಹೆಜ್ಜೆ ಇರಿಸಲಾಗಿದ್ದು, ಐರೋಪ್ಯ ಒಕ್ಕೂಟಕ್ಕೆ ಸಮಾನವಾಗಿ ಆಫ್ರಿಕಾ ಒಕ್ಕೂಟ, ಖಾಯಂ ಸದಸ್ಯತ್ವ ಪಡೆದಿದೆ.
ಜಿ20 ಕುಟುಂಬದ ಸದಸ್ಯತ್ವಕ್ಕೆ ಆಫ್ರಿಕಾ ಒಕ್ಕೂಟವನ್ನು ಸ್ವಾಗತಿಸಿರುವ ಪ್ರಧಾನಿ ಮೋದಿ, ಈ ಮೂಲಕ ಜಿ20 ಹಾಗೂ ಜಾಗತಿಕ ಮಟ್ಟದಲ್ಲಿ ದಕ್ಷಿಣದ ಧ್ವನಿಯನ್ನು ಮತ್ತಷ್ಟು ಬಲಗೊಳಿಸಲಿದೆ ಎಂದು ಹೇಳಿದರು.
'ಸಬ್ ಕಾ ಸಾಥ್' ಕಲ್ಪನೆಗೆ ಅನುಗುಣವಾಗಿ ಆಫ್ರಿಕಾ ಒಕ್ಕೂಟಕ್ಕೆ ಖಾಯಂ ಸದಸ್ಯತ್ವ ನೀಡಬೇಕು ಎಂದು ಭಾರತ ಪ್ರಸ್ತಾಪಿಸಿತ್ತು. ಈ ಪ್ರಸ್ತಾಪಕ್ಕೆ ನಾವೆಲ್ಲರೂ ಅನುಮೋದನೆ ನೀಡಿದ್ದೇವೆ ಎಂದು ನಂಬುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.