HEALTH TIPS

ಇಸ್ರೋ ಮತ್ತೊಂದು ಇತಿಹಾಸ: ಆದಿತ್ಯಾ L1 ನೌಕೆ ಹೊತ್ತ PSLV C-57 ರಾಕೆಟ್ ಉಡಾವಣೆ ಯಶಸ್ವಿ

             ಶ್ರೀಹರಿಕೋಟಾ: ಚಂದ್ರಯಾನ-3 ಯಶಸ್ಸಿನ ಖುಷಿಯಲ್ಲಿರುವ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇದೀಗ ತನ್ನ ಬಹು ನಿರೀಕ್ಷಿತ ಆದಿತ್ಯಾ L1 ಉಪಗ್ರಹ ಉಡಾವಣೆಯನ್ನು ಯಶಸ್ವಿಯಾಗಿ ಉಡಾಯಿಸಿದೆ.

             ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿ ಆದಿತ್ಯಾ ಎಲ್ 1 ನೌಕೆಯನ್ನು ಹೊತ್ತ ಪಿಎಲ್ಎಲ್ ವಿ- ಸಿ-57 ರಾಕೆಟ್ ಬೆಳಗ್ಗೆ 11.50ಕ್ಕೆ ನಭಕ್ಕೆ ಹಾರಿತು. ತನ್ನ ಎಲ್ಲ ಹಂತಗಳನ್ನು ಅತ್ಯುತ್ತಮವಾಗಿ ನಿಭಾಯಿಸಿದ ಪಿಎಸ್ ಎಲ್ ವಿ ಸಿ 57 ನೌಕೆ ಎಲ್ಲ ಮೂರೂ ಹಂತಗಳನ್ನು ಯಶಸ್ವಿಯಾಗಿ ನಿಭಾಯಿಸಿ ನೌಕೆಯನ್ನು ಬಾಹ್ಯಾಕಾಶಕ್ಕೆ ಯಶಸ್ವಿಯಾಗಿ ತಲುಪಿಸಿತು.


         ಇಸ್ರೋ ಆದಿತ್ಯ ಎಲ್‌-1 ನೌಕೆಯನ್ನ ಭೂಮಿಯಿಂದ 1.5 ಮಿಲಿಯನ್‌ ಕಿಲೋಮೀಟರ್‌ ದೂರದ ಲಾಂಗ್ರೇಜ್‌ ಪಾಯಿಂಟ್‌ಗೆ ತಲುಪಿ ಸೂರ್ಯನ ಬಗ್ಗೆ ಅಧ್ಯಯನ ನಡೆಸಲಿದೆ. 

             ಆದಿತ್ಯ ಎಲ್1 ನೌಕೆ, ಒಟ್ಟು 7 ವೈಜ್ಞಾನಿಕ ಉಪಕರಣಗಳನ್ನ ಹೊತ್ತು ಸೂರ್ಯಶೋಧಕ್ಕೆ ಹೊರಡುತ್ತಿದೆ. ಇದರಲ್ಲಿ ಮೂರು ಉಪಕರಣಗಳು ಸೂರ್ಯನನ್ನು ನೋಡುತ್ತಾ ವಿವಿಧ ಭಾಗಗಳ ಅಧ್ಯಯನ ಮಾಡುತ್ತೆ. ಉಳಿದ ಮೂರು ಉಪಕರಣಗಳು, ಸೂರ್ಯನಿಂದ ಬರುವ ವಿಕಿರಣ ಮತ್ತು ವಸ್ತುಗಳನ್ನು ಅಳತೆ ಮಾಡುವ ಕೆಲಸ ಮಾಡುತ್ತೆ. ವಿಶೇಷ ಅಂದ್ರೆ ಆದಿತ್ಯ ಎಲ್‌1ನಲ್ಲಿರುವ ಉಪಕರಣಗಳು ಎಲ್‌1 ಪಾಯಿಂಟ್‌ನಲ್ಲೇ ಸುತ್ತುತ್ತಾ ಕೃತಕ ಗ್ರಹಣ ಕೂಡ ಸೃಷ್ಟಿಸಬಲ್ಲವು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries