ನವದೆಹಲಿ: ಉತ್ತರ ಪ್ರದೇಶದ ಶ್ರೀಕೃಷ್ಣ ಜನ್ಮಭೂಮಿ-ಶಾಹಿ ಈದ್ಗಾ ವಿವಾದ ಪ್ರಕರಣದ ವಿಚಾರಣೆಯನ್ನು ಮಥುರಾ ಕೋರ್ಟ್‌ಗೆ ವರ್ಗಾಯಿಸಿರುವ ಅಲಹಾಬಾದ್ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನವೆಂಬರ್ 10ರಂದು ನಡೆಸುವುದಾಗಿ ಸುಪ್ರೀಂ ಕೋರ್ಟ್, ಸೋಮವಾರ ಹೇಳಿದೆ.

ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರಿದ್ದ ವಿಭಾಗೀಯ ನ್ಯಾಯಪೀಠವು, ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಶಾಹಿ ಮಸೀದಿ ಈದ್ಗಾ ಟ್ರಸ್ಟ್‌ನ ನಿರ್ವಹಣಾ ಸಮಿತಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿತು.
ಅಕ್ಟೋಬರ್ 3ರಂದು ನಡೆದ ವಿಚಾರಣೆ ವೇಳೆ, ವಿವಾದಕ್ಕೆ ಸಂಬಂಧಿಸಿದ ಮಾಹಿತಿ ಹಾಗೂ ದಾಖಲೆ ಪತ್ರಗಳನ್ನು ನ್ಯಾಯಪೀಠದ ಮುಂದೆ ಸಲ್ಲಿಸುವಂತೆ ಅಲಹಾಬಾದ್ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸೂಚಿಸಿತ್ತು.