ಕಾಸರಗೋಡು: ಜಿಲ್ಲಾ ಕರಾಟೆ ಅಸೋಸಿಯೇಶನ್ ನೇತೃತ್ವದಲ್ಲಿ 11ನೇ ಕರಾಟೆ ಚಾಂಪಿಯನ್‍ಶಿಪ್ ಕಾಸರಗೋಡು ನಗರಸಭಾಂಗಣದಲ್ಲಿ ಜರುಗಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಸಮಾರಂಭ ಉದ್ಘಾಟಿಸಿದರು.
ಜಿಲ್ಲಾ ಕರಾಟೆ ಅಸೋಸಿಯೇಶನ್ ಅಧ್ಯಕ್ಷ ಡಾಮಿನಿಕ್ ಜೋಸೆಫ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾಧ್ಯಕ್ಷ ವಕೀಲ ವಿ.ಎಂ. ಮುನೀರ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭ ಕರಾಟೆಯಲ್ಲಿ ಬೆಳ್ಳಿ ಪದಕ ವಿಜೇತೆ ಸ್ಮೃತಿ ಕೆ ಶಾಜು ಅವರನ್ನು ಸನ್ಮಾನಿಸಲಾಯಿತು. ನಿಸಾರ್, ಟಿ.ಜಯಚಂದ್ರನ್, ಸಿ.ರಂಜಿತನ್ ಉಪಸ್ಥಿತರಿದ್ದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಜು ಮಾಧವನ್ ಸ್ವಾಗತಿಸಿದರು. ಕರಾಟೆ ಅಸೋಸಿಯೇಶನ್ ಅಂಗೀಕೃತ ಜಿಲ್ಲೆಯ 250ಮಂದಿ ಸದಸ್ಯರು ಕರಾಟೆ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.