HEALTH TIPS

ತಮಿಳುನಾಡಿನ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಬೆಂಕಿ ಅವಘಡ: 11 ಮಂದಿ ಸಾವು

                   ಶಿವಕಾಶಿ:ತಮಿಳುನಾಡಿನ ಎರಡು ಪಟಾಕಿ ಕಾರ್ಖಾನೆಗಳಲ್ಲಿ ಸ್ಫೋಟ ಸಂಭವಿಸಿದ ಪರಿಣಾಮ ಈ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು ಮೃತಪಟ್ಟವರಲ್ಲಿ 9 ಮಹಿಳೆಯರು ಸೇರಿದ್ದಾರೆ. 

                    ವಿರುದುನಗರ ಜಿಲ್ಲೆಯ ರಂಗಪಾಳ್ಯಂ ಮತ್ತು ಶಿವಕಾಶಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪಟಾಕಿ ಮಾದರಿ ಪರೀಕ್ಷೆ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಇನ್ನಿಬ್ಬರು ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

               ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮೃತಪಟ್ಟವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ತಲಾ 3 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.

                ಹಿರಿಯ ಪೊಲೀಸ್ ಅಧಿಕಾರಿಯ ಪ್ರಕಾರ, ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯ ಜನರು ಒಟ್ಟಾಗಿ ಬೆಂಕಿಯನ್ನು ನಂದಿಸಲು ಮತ್ತು ಸಂತ್ರಸ್ತರನ್ನು ರಕ್ಷಿಸಲು ಶ್ರಮಿಸುತ್ತಿದ್ದಾರೆ. ಘಟನೆ ಮತ್ತು ಕಾರ್ಖಾನೆಗಳಿಗೆ ಮಾನ್ಯ ಪರವಾನಗಿ ಇದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದರು.

               ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಹಠಾತ್ ಸ್ಫೋಟದ ನಂತರ, ಏಳು ಸುಟ್ಟ ಮೃತದೇಹಗಳು ಸ್ಥಳದಲ್ಲಿ ಪತ್ತೆಯಾಗಿವೆ. ಅವುಗಳನ್ನು ಇನ್ನೂ ಗುರುತಿಸಲಾಗಿಲ್ಲ ಎಂದು ಪೊಲೀಸರು ಹೇಳಿದರು. ಸತ್ತವರು ಕಾರ್ಮಿಕರಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

                 ಕಮ್ಮಪಟ್ಟಿ ಗ್ರಾಮದಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಓರ್ವ ಸಾವನ್ನಪ್ಪಿದ ಘಟನೆ ಎರಡನೇ ಬಾರಿಗೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries