ಅಮರಾವತಿ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿದೆ. 50ಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಎರಡು ರೈಲುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿದೆ. 50ಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಪ್ರಯಾಣಿಕರು ಆ ಪ್ರದೇಶದಲ್ಲಿ ಸಿಕ್ಕಿಹಾಕಿಕೊಳ್ಳದಂತೆ ಬಸ್ ವ್ಯವಸ್ಥೆಯನ್ನು ಮಾಡಿದ್ದೇವೆ. ಹಳಿಗಳನ್ನು ಭಾಗಶಃ ಸರಿಪಡಿಸಲಾಗಿದೆ. ಘಟನೆಯ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ತಾಂತ್ರಿಕ ಕಾರಣದಿಂದಾಗಿ ನಿಲುಗಡೆಗೊಂಡಿದ್ದ ವಿಶಾಖಪಟ್ಟಣ-ರಾಯಗಢ ಪ್ರಯಾಣಿಕರ ರೈಲಿಗೆ ವಿಶಾಖಪಟ್ಟಣ-ಪಲಾಸ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಯಗಢ ರೈಲಿನ ಹಿಂಬದಿಯ ಮೂರು ಬೋಗಿಗಳು ಹಳಿ ತಪ್ಪಿವೆ ಎಂದು ಈಸ್ಟ್ ಕೋಸ್ಟ್ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.