HEALTH TIPS

ಉಜ್ವಲ ಗ್ರಾಹಕರ ಎಲ್‌ಪಿಜಿ ಸಬ್ಸಿಡಿ ಮೊತ್ತ 200 ರೂ. ನಿಂದ 300 ರೂ.ಗೆ ಹೆಚ್ಚಿಸಿದ ಕೇಂದ್ರ

           ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ನೀಡಲಾಗುತ್ತಿದ್ದ ಸಬ್ಸಿಡಿ ಮೊತ್ತವನ್ನು 200 ರೂ.ನಿಂದ 300 ರೂ.ಗೆ ಸರ್ಕಾರ ಹೆಚ್ಚಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಬುಧವಾರ ತಿಳಿಸಿದ್ದಾರೆ.

                 ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾ ತೆಗೆದುಕೊಳ್ಳಲಾಗಿದ್ದು, ಉಜ್ವಲಾ ಯೋಜನೆಯ ಫಲಾನುಭವಿಗಳು ಪ್ರಸ್ತುತ 14.2 ಕೆಜಿ ಸಿಲಿಂಡರ್‌ಗೆ 703 ರೂ.ಗಳನ್ನು ಪಾವತಿಸುತ್ತಿದ್ದಾರೆ. ಇದರ ಮಾರುಕಟ್ಟೆ ಬೆಲೆ 903 ರೂ. ಇದ್ದು, ಈಗ ಅದನ್ನು ಈಗ 603 ರೂ. ಇಳಿಸಲಾಗಿದೆ ಎಂದು ಠಾಕೂರ್ ಹೇಳಿದ್ದಾರೆ.

               ಕೇಂದ್ರ ಸರ್ಕಾರ ಈ ಹಿಂದೆ ಪಿಎಂ ಉಜ್ವಲ ಯೋಜನೆ ಹೊಂದಿರುವವರಿಗೆ 200 ರೂ. ಸಬ್ಸಿಡಿ ನೀಡಿತ್ತು. ಈಗ ಮತ್ತೆ 100 ರೂ ಸಬ್ಸಿಡಿ ಒದಗಿಸುತ್ತಿದೆ. ಅಲ್ಲಿಗೆ ಈ ಯೋಜನೆಯ ಫಲಾನುಭವಿಗಳಿಗೆ ಒಟ್ಟು 300 ರೂ. ಸಬ್ಸಿಡಿ ಸಿಗುತ್ತದೆ. ಇದರೊಂದಿಗೆ 14.2 ಕಿಲೋ ಎಲ್​ಪಿಜಿ ಸಿಲಿಂಡರ್ ಅನ್ನು ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳು 605.50 ರೂಪಾಯಿಗೆ ಪಡೆಯಬಹುದು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries