ವಾಷಿಂಗ್ಟನ್: ಇಸ್ರೇಲ್ ಮೇಲೆ ಹಮಾಸ್ ಬಂಡುಕೋರರು ನಡೆಸಿದ ರಾಕೆಟ್ ದಾಳಿಯ ನಂತರ ಅಮೆರಿಕದ 20ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೆಕ್ ಸುಲ್ಲಿವಾನ್ ತಿಳಿಸಿದ್ದಾರೆ.
ನಾಪತ್ತೆಯಾದವರಲ್ಲಿ ಎಷ್ಟು ಮಂದಿಯನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.
ಅಕ್ಟೋಬರ್ 7ರಂದು ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ ದಿಢೀರ್ ರಾಕೆಟ್ ದಾಳಿ ನಡೆಸಿದ್ದರು. ಹಮಾಸ್ ನಡೆಸಿದ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಇದುವರೆಗೆ 900ಕ್ಕಿಂತ ಹೆಚ್ಚು ಜನರು ಮೃತಪಟ್ಟಿದ್ದಾರೆ. ಗಾಜಾದಲ್ಲಿ ಇದುವರೆಗೆ 687 ಜನ ಮೃತಪಟ್ಟಿದ್ದಾರೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.
ಗಾಜಾ ಪಟ್ಟಿಯ ಪೂರ್ವ ಗಡಿಯ ಬಳಿ ಒಂದೇ ಸ್ಥಳದಲ್ಲಿ ಹಮಾಸ್ ಬಂಡುಕೋರರು 100ಕ್ಕೂ ಹೆಚ್ಚು ಮಂದಿಯನ್ನು ಕೊಂದಿದ್ದಾರೆ ಎಂದು ತಿಳಿದುಬಂದಿದೆ.