ನವದೆಹಲಿ: ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನದ ದಿನಾಂಕವನ್ನು ನವೆಂಬರ್ 25ಕ್ಕೆ ಮುಂದೂಡಲಾಗಿದೆ.
ನವದೆಹಲಿ: ರಾಜಸ್ಥಾನ ವಿಧಾನಸಭೆ ಚುನಾವಣೆಯ ಮತದಾನದ ದಿನಾಂಕವನ್ನು ನವೆಂಬರ್ 25ಕ್ಕೆ ಮುಂದೂಡಲಾಗಿದೆ.
ವಿವಿಧ ರಾಜಕೀಯ ಪಕ್ಷಗಳು, ಸಾಮಾಜಿಕ ಸಂಸ್ಥೆಗಳು ಸೇರಿದಂತೆ ಮಾಧ್ಯಮಗಳಿಂದಲೂ ಚುನಾವಣಾ ದಿನಾಂಕ ಬದಲಾವಣೆ ಕೂಗು ಕೇಳಿಬಂದಿತ್ತು. ಮದುವೆ ಸಮಾರಂಭ, ಸಾರ್ವಜನಿಕ ಕಾರ್ಯಕ್ರಮಗಳಿಂದಾಗಿ ತೊಂದರೆ ಉಂಟಾಗಬಹುದು. ಅಲ್ಲದೆ ಮತದಾನದ ಪ್ರಮಾಣ ಕಡಿಮೆಯಾಗಬಹುದು ಎಂದು ಪರಿಗಣಿಸಿ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಚುನಾವಣಾ ಮತ ಎಣಿಕೆ ಡಿ.3ರಂದು ನಡೆಯಲಿದೆ.