ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ: 24 ಗಂಟೆಗಳಲ್ಲಿ 24 ಸಾವು!
0
ಅಕ್ಟೋಬರ್ 03, 2023
Tags
ಮಹಾರಾಷ್ಟ್ರ: ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ.
ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ 24 ಜನರ ಸಾವಿಗೆ ಔಷಧಿ ಕೊರತೆಯೇ ಕಾರಣ ಎಂದು ಸೋಮವಾರ (ಅ.2) ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ 24 ಗಂಟೆಗಳಲ್ಲಿ ಆರು ಗಂಡು ಮತ್ತು ಆರು ಹೆಣ್ಣು ಶಿಶುಗಳು ಸಾವನ್ನಪ್ಪಿವೆ. ಹನ್ನೆರಡು ವಯಸ್ಕರು ವಿವಿಧ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ. ಹೆಚ್ಚಾಗಿ ಹಾವು ಕಡಿತದಿಂದ ಕೆಲವರು ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.
ಘಟನೆಗೆ ಪ್ರತಿಕ್ರಿಯಿಸಿದ ಸಿಎಂ ಏಕನಾಥ್ ಶಿಂಧೆ, 'ಈ ಸಾವುಗಳು ದುರದೃಷ್ಟಕರ, ಆಸ್ಪತ್ರೆಯಲ್ಲಿ ಏನಾಯಿತು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು' ಎಂದು ಮುಂಬೈನಲ್ಲಿ ಸುದ್ದಿಗಾರರಿಗೆ ತಿಳಿಸಿದರು.
'ನಾಂದೇಡ್‌ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ 24 ಸಾವುಗಳು ಔಷಧಿ ಪೂರೈಕೆಯ ಕೊರತೆಯಿಂದ ಮಾತ್ರವಲ್ಲ. ಹಬ್ಬಗಳು ಮತ್ತು ಕಾರ್ಯಕ್ರಮಗಳನ್ನು ಪ್ರಚಾರ ಮಾಡುವ ಈ ಸರ್ಕಾರಕ್ಕೆ ನಾಚಿಕೆಯಾಗಬೇಕು ಎಂದು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ವಕ್ತಾರ ವಿಕಾಸ್ ಲಾವಾಂಡೆ ಟ್ವೀಟ್ ಮಾಡಿದ್ದಾರೆ,