ನವದೆಹಲಿ: ನೊಬೆಲ್ ಶಾಂತಿ ಪ್ರಶಸ್ತಿ ಪುರಸ್ಕೃತೆ ಮಲಾಲಾ ಯೂಸುಫ್ಝೈ ಅವರು ಪ್ಯಾಲೇಸ್ಟಿನಿಯನ್ನರಿಗೆ ಸಹಾಯ ಮಾಡುವ ಮೂರು ದತ್ತಿಗಳಿಗೆ ಸುಮಾರು ₹2.5 ಕೋಟಿ ನೆರವು ನೀಡುವುದಾಗಿ ಹೇಳಿದ್ದಾರೆ.
ಗಾಜಾದ ಆಸ್ಪತ್ರೆ ನಡೆದ ಭೀಕರ ದಾಳಿಯಿಂದಾಗಿ 500 ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದು, ಬಹಳ ಗಾಬರಿಯಾಗಿದೆ ಎಂದ ಅವರು ವಿಡಿಯೊ ಮೂಲಕ ಹೇಳಿಕೆ ನೀಡಿದ್ದಾರೆ. 'ಕದನ ವಿರಾಮ ನೀಡಿ ಗಾಜಾದಲ್ಲಿರುವವರಿಗೆ ಮಾನವೀಯ ನೆರವು ನೀಡಲು ಇಸ್ರೇಲ್ ಸರ್ಕಾರ ಅನುಮತಿ ನೀಡಬೇಕು' ಎಂದು ಒತ್ತಾಯಿಸಿದ್ದಾರೆ.
ಗಾಜಾದ ಅಹ್ಲಿ ಅರಬ್ ಆಸ್ಪತ್ರೆ ಮೇಲೆ ಇಸ್ರೇಲ್ನ ಸೇನೆ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 500 ಮಂದಿ ಹತರಾಗಿದ್ದರು.