ಅಕಲುಜ್ : 'ಸಮುದಾಯದ ಬೇಡಿಕೆಗಳನ್ನು ಇದೇ 25ರ ಒಳಗೆ ಈಡೇರಿಸದಿದ್ದರೆ, ಮತ್ತೆ ಹೋರಾಟಕ್ಕೆ ಇಳಿಯುತ್ತೇವೆ' ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅಕಲುಜ್ : 'ಸಮುದಾಯದ ಬೇಡಿಕೆಗಳನ್ನು ಇದೇ 25ರ ಒಳಗೆ ಈಡೇರಿಸದಿದ್ದರೆ, ಮತ್ತೆ ಹೋರಾಟಕ್ಕೆ ಇಳಿಯುತ್ತೇವೆ' ಎಂದು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜರಾಂಗೆ ಮಹಾರಾಷ್ಟ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಲು ಮಹಾರಾಷ್ಟ್ರ ಸರ್ಕಾರಕ್ಕೆ ಅಕ್ಟೋಬರ್ 24ರವರೆಗೆ ಕೊನೆಯ ಅವಕಾಶ ನೀಡಿದ್ದೇವೆ.
ಮರಾಠ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಜರಾಂಗೆ ಅವರು ಆಗಸ್ಟ್ 29ರಂದು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಪ್ರತಿಭಟನಕಾರರ ಮೇಲೆ ಸೆಪ್ಟೆಂಬರ್ 1ರಂದು ಪೊಲೀಸರು ಕೈಗೊಂಡ ಕ್ರಮದಿಂದಾಗಿ ಹಲವರು ಗಾಯಗೊಂಡಿದ್ದರು. ಇದರಿಂದಾಗಿ ಈ ಹೋರಾಟವು ರಾಷ್ಟ್ರ ಮಟ್ಟದ ಗಮನ ಸೆಳೆದಿತ್ತು. ಸರ್ಕಾರ ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲಿದೆ ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದರಿಂದ ಸೆಪ್ಟೆಂಬರ್ 14ರಂದು ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದರು.