ನವದೆಹಲಿ: ಇಸ್ರೇಲ್‌ನಿಂದ 286 ಮಂದಿ ಭಾರತೀಯರನ್ನು ಶೀಘ್ರವೇ ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ನವದೆಹಲಿ: ಇಸ್ರೇಲ್‌ನಿಂದ 286 ಮಂದಿ ಭಾರತೀಯರನ್ನು ಶೀಘ್ರವೇ ಭಾರತಕ್ಕೆ ಕರೆತರಲಾಗುವುದು ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ತಿಳಿಸಿದ್ದಾರೆ.
ಸ್ವದೇಶಕ್ಕೆ ಮರಳಲು ಬಯಸುವ ಭಾರತೀಯರನ್ನು ಕರೆತರಲು ಕೇಂದ್ರ ಸರ್ಕಾರದ ಈಚೆಗೆ 'ಆಪರೇಷನ್ ಅಜಯ್' ಕಾರ್ಯಾಚರಣೆ ಆರಂಭಿಸಿತ್ತು.
ಅ. 7ರಂದು ಹಮಾಸ್ ಬಂಡುಕೋರರು ಇಸ್ರೇಲ್‌ನ ದಕ್ಷಿಣ ಭಾಗದಲ್ಲಿ ನಡೆಸಿದ ದಾಳಿಯಲ್ಲಿ 1,300ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದರು. ಇದಾದ ನಂತರ ಇಸ್ರೇಲ್ ಸೇನೆ ವೈಮಾನಿಕ ದಾಳಿ ನಡೆಸಿದೆ. ಇದರಿಂದ 2,800ಕ್ಕೂ ಹೆಚ್ಚು ಪ್ಯಾಲೆಸ್ಟೀನ್ ಜನರು ಮೃತಪಟ್ಟಿದ್ದಾರೆ. 23 ಲಕ್ಷಕ್ಕೂ ಅಧಿಕ ಜನ ಮನೆ ತೊರೆದಿದ್ದಾರೆ. ಪ್ಯಾಲೆಸ್ಟೀನ್‌ಗೆ ಪೂರೈಕೆಯಾಗುತ್ತಿದ್ದ ಆಹಾರ, ಇಂಧನ, ವೈದ್ಯಕೀಯ ನೆರವು ಎಲ್ಲವನ್ನೂ ತಡೆ ಹಿಡಿಯಲಾಗಿದೆ. ಹೀಗಾಗಿ ಅಲ್ಲಿ ತೀವ್ರ ಹಾಹಾಕಾರ ಎದುರಾಗಿದೆ ಎಂದು ವರದಿಯಾಗಿದೆ.