ನವದೆಹಲಿ: ಚುನಾವಣಾ ಬಾಂಡ್ ಯೋಜನೆಯ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇದೇ 31ರಂದು ವಿಚಾರಣೆ ನಡೆಯಲಿದೆ.
ನವದೆಹಲಿ: ಚುನಾವಣಾ ಬಾಂಡ್ ಯೋಜನೆಯ ಮಾನ್ಯತೆಯನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಸುಪ್ರೀಂ ಕೋರ್ಟ್‌ನಲ್ಲಿ ಇದೇ 31ರಂದು ವಿಚಾರಣೆ ನಡೆಯಲಿದೆ.
ಈ ಅರ್ಜಿಗಳ ವಿಚಾರಣೆಗೆ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠ ರಚಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ನೇತೃತ್ವದ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿ.ಆರ್. ಗವಾಯಿ, ಜೆ.ಬಿ. ಪಾರ್ದೀವಾಲಾ ಮತ್ತು ಮನೋಜ್ ಮಿಶ್ರಾ ಇದ್ದಾರೆ. ಸಾಂವಿಧಾನಿಕ ಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್ ಅ.16ರಂದು ತಿಳಿಸಿತ್ತು.