HEALTH TIPS

ಕೇರಳ: ಸಾರಿಗೆ ಬಸ್‌ಗಳಿಗೆ ಅ.31ರೊಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

           ತಿರುವನಂತಪುರ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್‌ಗಳಿಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕೆಂದು ರಾಜ್ಯ ಸಾರಿಗೆ ಸಚಿವ ಆಯಂಟನಿ ರಾಜು ಸೂಚಿಸಿದ್ದಾರೆ.

             ಅಕ್ಟೋಬರ್‌ 31ರೊಳಗೆ ಕೇರಳ ಸರ್ಕಾರಿ ಸ್ವಾಮ್ಯದ ಎಲ್ಲಾ ಸಾರಿಗೆ ಬಸ್‌ಗಳು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕೆಂದು ರಾಜ್ಯ ಸರ್ಕಾರವು ಆದೇಶಿಸಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆಯಂಟನಿ, 'ಪ್ರತಿ ಬಸ್‌ನ ಮುಂಭಾಗ ಮತ್ತು ಹಿಂಭಾಗದಲ್ಲಿ ಕ್ಯಾಮೆರಾಗಳನ್ನು ಅಳವಡಿಸಲಾಗುವುದು. ಕ್ಯಾಮೆರಾಗಳನ್ನು ಅಳವಡಿಸುವುದರಿಂದ ಬಸ್‌ನ ಒಳಗೆ ಮತ್ತು ಹೊರಗೆ ಸಂಚಾರ ನಿಯಮ ಉಲ್ಲಂಘನೆ ಮಾಡಿದರೆ ಸುಲಭವಾಗಿ ಹಾಗೂ ತ್ವರಿತವಾಗಿ ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ' ಎಂದು ತಿಳಿಸಿದರು.

                  'ರಾಜ್ಯದಲ್ಲಿ ಸಾವಿರಾರು ಬಸ್‌ಗಳಿಗೆ ಕ್ಯಾಮೆರಾಗಳನ್ನು ಖರೀದಿಸಲು ಸಮಯ ತೆಗೆದುಕೊಳ್ಳುವುದರಿಂದ ಈ ಉಪಕ್ರಮವನ್ನು ಅನುಷ್ಠಾನಗೊಳಿಸಲು ವಿಳಂಬವಾಗಿದೆ. ಆದರೆ, ಅಕ್ಟೋಬರ್‌ 31ರ ಗಡುವನ್ನು ವಿಸ್ತರಿಸುವುದಿಲ್ಲ. ಜೊತೆಗೆ ನವೆಂಬರ್‌ 1 ರಿಂದ ಸಾರಿಗೆ ಬಸ್‌ ಸೇರಿದಂತೆ ಭಾರಿ ವಾಹನಗಳ ಮುಂಭಾಗದ ಸೀಟಿನಲ್ಲಿ ಕುಳಿತುಕೊಳ್ಳುವ ಚಾಲಕರು ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಸೀಟ್‌ ಬೆಲ್ಟ್‌ ಧರಿಸಬೇಕು' ಎಂದು ಸಾರಿಗೆ ಸಚಿವ ಸ್ಪಷ್ಟಪಡಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries