ಜಿನೇವಾ: ಇಸ್ರೇಲ್-ಹಮಾಸ್ ಯುದ್ಧದಲ್ಲಿ ಗಾಜಾದಲ್ಲಿ ಮೃತಪಟ್ಟವರ ಸಂಖ್ಯೆ 5 ಸಾವಿರ ದಾಟಿದೆ. ಅವರಲ್ಲಿ 35 ಮಂದಿ ವಿಶ್ವಸಂಸ್ಥೆ ಸಿಬ್ಬಂದಿ ಕೂಡ ಸೇರಿದ್ದಾರೆ ಎಂದು ಪ್ಯಾಲೆಸ್ಟೀನ್ ನಿರಾಶ್ರಿತರಿಗಾಗಿ ಕೆಲಸ ಮಾಡುತ್ತಿರುವ ವಿಶ್ವಸಂಸ್ಥೆಯ ಪರಿಹಾರ ಮತ್ತು ಸೇವಾ ಏಜೆನ್ಸಿ (UNRWA) ತಿಳಿಸಿದೆ.

'ಸಹೋದ್ಯೋಗಿಗಳ ಸಾವಿಗೆ ಸಂತಾಪ ಸೂಚಿಸುತ್ತೇವೆ. ಇನ್ನೂ ಇಸ್ರೇಲ್‌ನಲ್ಲಿ ಇರುವ ಇತರ ಸಿಬ್ಬಂದಿಗೆ ಅಗತ್ಯವಿರುವ ನೆರವನ್ನು ಒದಗಿಸುತ್ತೇವೆ' ಎಂದು ವಿಶ್ವಸಂಸ್ಥೆಯ ಮಹಾಪ್ರಧಾನ ಕಾರ್ಯದರ್ಶಿ ಆಂಟನಿಯೊ ಗುಟೆರಸ್ ಹೇಳಿದ್ದಾರೆ.
ಗಾಜಾದಲ್ಲಿ ಸ್ಥಾಪಿಸಲಾಗಿದ್ದ 40 UNRWA ಕಚೇರಿಗಳಿಗೆ ಹಾನಿಯಾಗಿದೆ.
ಅಕ್ಟೋಬರ್ 7ರಿಂದ ಇದುವರೆಗೆ 35 ವಿಶ್ವಸಂಸ್ಥೆ ಸಿಬ್ಬಂದಿ ಮೃತಪಟ್ಟಿದ್ದು, ದಾಳಿ ಮುಂದುವರಿದಿರುವ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗುವ ಸಾಧ್ಯತೆ ಇದೆ ಎಂದು UNRWAನ ವಕ್ತಾರರು ಹೇಳಿದ್ದಾರೆ.
ಇದುವರೆಗೆ ಇಸ್ರೇಲ್ ಸೇನೆ ಮತ್ತು ಹಮಾಸ್ ಉಗ್ರರ ನಡುವಿನ ದಾಳಿ ಮತ್ತು ಪ್ರತಿದಾಳಿಯಲ್ಲಿ 5 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ಟೇನಿಯರು ಹಾಗೂ 1,400 ಕ್ಕೂ ಹೆಚ್ಚು ಇಸ್ರೇಲಿಗರು ಹತ್ಯೆಯಾಗಿದ್ದಾರೆ ಎಂದು ಇಸ್ರೇಲ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.