ಟೆಲ್ ಅವಿವ್: ಗಾಜಾ ಪಟ್ಟಿಯ ಬಳಿ ಇಸ್ರೇಲ್ ಮೇಲೆ ಹಮಾಸ್ ಉಗ್ರರು ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 400ಕ್ಕೆ ಏರಿಕೆಯಾಗಿದೆ ಮತ್ತು ಸಾವಿನ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆ ಇದೆ ಎಂದು ಟೈಮ್ಸ್ ಆಫ್ ಇಸ್ರೇಲ್ ಭಾನುವಾರ ವರದಿ ಮಾಡಿದೆ.
ಉಗ್ರರ ದಾಳಿಯಲ್ಲಿ ಹಲವು ಸೈನಿಕರು ಮತ್ತು ಪೊಲೀಸರು ಸೇರಿದಂತೆ 400ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಮತ್ತು 2,048ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು, ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಇಸ್ರೇಲ್ ಮೂಲದ ಮಾಧ್ಯಮ ವರದಿ ಮಾಡಿದೆ.
ಹಮಾಸ್ ರಾಕೆಟ್ ದಾಳಿ ಪ್ರಾರಂಭಿಸಿದ 24 ಗಂಟೆಗಳ ನಂತರ, ಗಾಜಾ ಗಡಿಯಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, IDF ಎಲ್ಲಾ ಭಯೋತ್ಪಾದಕರನ್ನು ತಟಸ್ಥಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಟೈಮ್ಸ್ ಆಫ್ ಇಸ್ರೇಲ್ ವರದಿ ಮಾಡಿದೆ.
ಪ್ಯಾಲೆಸ್ತೀನ್ನ ಭಯೋತ್ಪಾದಕ ಸಂಘಟನೆ ಹಮಾಸ್ ಕೇವಲ 20 ನಿಮಿಷಗಳಲ್ಲಿ ಇಸ್ರೇಲ್ ಮೇಲೆ 5 ಸಾವಿರ ರಾಕೆಟ್ಗಳನ್ನು ಹಾರಿಸಿದ್ದು, ಈ ಸಂರ್ಷದಲ್ಲಿ ಸಾವಿನ ಸಂಖ್ಯೆ ನಿರಂತರವಾಗಿ ಹೆಚ್ಚಾಗತೊಡಗಿದೆ.
ಇನ್ನೂ ಪ್ರತೀಕಾರದ ದಾಳಿಯಲ್ಲಿ ಇದುವರೆಗೆ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ 230 ಮಂದಿ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಹಮಾಸ್ ಹಲವು ಇಸ್ರೇಲಿ ಸೈನಿಕರು ಹಾಗೂ ಇಸ್ರೇಲಿ ಪ್ರಜೆಗಳನ್ನು ಒತ್ತೆಯಾಳಾಗಿರಿಸಿಕೊಂಡಿತ್ತು.