ಪಿಥೋರಗಢ: ಉತ್ತರಾಖಂಡದ ಪಿಥೋರಗಢದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0ರಷ್ಟು ತೀವ್ರತೆ ದಾಖಲಾಗಿದೆ. ಸದ್ಯಕ್ಕೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಪಿಥೋರಗಢ: ಉತ್ತರಾಖಂಡದ ಪಿಥೋರಗಢದಲ್ಲಿ ಸೋಮವಾರ ಬೆಳಿಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.0ರಷ್ಟು ತೀವ್ರತೆ ದಾಖಲಾಗಿದೆ. ಸದ್ಯಕ್ಕೆ ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ.
ಭೂಕಂಪದ ಕೇಂದ್ರಬಿಂದು ಪಿಥೋರಗಢದಿಂದ ಈಶಾನ್ಯಕ್ಕೆ 40 ಕಿಲೋಮೀಟರ್ ದೂರದಲ್ಲಿದೆ.
ನಿನ್ನೆ (ಭಾನುವಾರ) ದೆಹಲಿ-ಎನ್‌ಸಿಆರ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
ಸಂಜೆ 4.09ಕ್ಕೆ ಭೂಮಿ ಕಂಪಿಸಿತ್ತು. ಹರಿಯಾಣದ ಫರಿದಾಬಾದ್‌ನಲ್ಲಿ 9 ಕಿ.ಮೀ ಆಳದಲ್ಲಿ ಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದು ಎನ್‌ಸಿಎಸ್ 'ಎಕ್ಸ್'ನಲ್ಲಿ ಪೋಸ್ಟ್ ಇಲಾಖೆ ಪೋಸ್ಟ್ ಹಂಚಿಕೊಂಡಿತ್ತು.