ಗ್ಯಾಂಗ್ಟಕ್: ಸಿಕ್ಕಿಂನಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬುಧವಾರ ಎರಡು ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ 76 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗ್ಯಾಂಗ್ಟಕ್: ಸಿಕ್ಕಿಂನಲ್ಲಿ ಪ್ರವಾಹದಿಂದ ಮೃತಪಟ್ಟವರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ. ಬುಧವಾರ ಎರಡು ಮೃತದೇಹಗಳು ಪತ್ತೆಯಾಗಿದ್ದು, ಇನ್ನೂ 76 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 4ರಂದು ಮೇಘಸ್ಫೋಟಗೊಂಡು ತೀಸ್ತಾ ನದಿಯಲ್ಲಿ ಪ್ರವಾಹ ಉಂಟಾಗಿತ್ತು.
ಸದ್ಯ ರಾಜ್ಯದ ವಿವಿಧೆಡೆ 20 ಪರಿಹಾರ ಶಿಬಿರಗಳಲ್ಲಿ 2,080 ಮಂದಿ ಆಶ್ರಯ ಪಡೆದಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಮಂಡಳಿ ತಿಳಿಸಿದೆ.
ಬಹುತೇಕ ಮೃತದೇಹಗಳು ಪಾಕ್‌ಯಾಂಗ್‌ನಲ್ಲಿ ಪತ್ತೆಯಾಗಿವೆ. 26 ಮೃತದೇಹಗಳು ಇಲ್ಲಿ ಪತ್ತೆಯಾಗಿವೆ. ಮಂಗನ್‌ನಲ್ಲಿ ನಾಲ್ಕು, ಗ್ಯಾಂಗ್ಟಕ್‌ನಲ್ಲಿ ಎಂಟು ಮತ್ತು ನಂಚಿಯಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ ಎಂದು ಅದು ಪ್ರಕಟಣೆಯಲ್ಲಿ ತಿಳಿಸಿದೆ.