ನವದೆಹಲಿ: ಭಾನುವಾರ ಸಂಜೆ ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ತೀವ್ರತೆ ದಾಖಲಾಗಿದೆ. ಕಳೆದ 24 ಘಂಟೆಗಳ ಅವಧಿಯಲ್ಲಿ ನೇಪಾಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ.
ನವದೆಹಲಿ: ಭಾನುವಾರ ಸಂಜೆ ನೇಪಾಳದಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3ತೀವ್ರತೆ ದಾಖಲಾಗಿದೆ. ಕಳೆದ 24 ಘಂಟೆಗಳ ಅವಧಿಯಲ್ಲಿ ನೇಪಾಳದಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ.
ಭಾನುವಾರ ಸಂಜೆ 5:18ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರ ತೀವ್ರತೆ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರಕಟಣೆ ಹೊರಡಿಸಿರುವ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS), ಭಾನುವಾರ ಸಂಜೆ 5:18 ರ ಸುಮಾರಿಗೆ ನೇಪಾಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.1 ತೀವ್ರತೆ ದಾಖಲಾಗಿದೆ. ಭಾನುವಾರ ಬೆಳಳಗ್ಗೆ 7.39ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಇನ್ನು ಹಿಮಾಲಯ ತಪ್ಪಲಿನ ಈ ದೇಶದಲ್ಲಿ ಭೂಕಂಪ ಸಾಮಾನ್ಯ ಎನ್ನುವಂತಾಗಿದೆ. ನೇಪಾಳವು ವಿಶ್ವದ 11ನೇ ಅತಿ ಹೆಚ್ಚು ಭೂಕಂಪನ ಪೀಡಿತ ರಾಷ್ಟ್ರವಾಗಿದೆ.