ಹೈದರಾಬಾದ್: ಸುಪ್ರಸಿದ್ಧ ಧಾರ್ಮಿಕ ಸ್ಥಳ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದು, ಭಕ್ತರ ದಟ್ಟಣೆಯಿಂದಾಗಿ ದರ್ಶನಕ್ಕಾಗಿ 48 ಗಂಟೆಗೂ ಅಧಿಕ ಸಮಯ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಹೈದರಾಬಾದ್: ಸುಪ್ರಸಿದ್ಧ ಧಾರ್ಮಿಕ ಸ್ಥಳ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವವರ ಸಂಖ್ಯೆ ಹೆಚ್ಚಿದ್ದು, ಭಕ್ತರ ದಟ್ಟಣೆಯಿಂದಾಗಿ ದರ್ಶನಕ್ಕಾಗಿ 48 ಗಂಟೆಗೂ ಅಧಿಕ ಸಮಯ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಭಕ್ತರ ದಟ್ಟಣೆಯ ಹಿನ್ನೆಲೆಯಲ್ಲಿ ಕುಡಿಯುವ ನೀರು, ಹಾಲು, ಅನ್ನ ಪ್ರಸಾದಕ್ಕೆ ವಿತರಣೆಗೆ ನೆರವಾಗಲು 2,500 ಸ್ವಯಂಸೇವಕರನ್ನು ಟಿಟಿಡಿ ನಿಯೋಜಿಸಿದೆ.
ಅ.2 ರವರೆಗೆ ಸಾಲು ಸಾಲು ರಜೆ ಇರುವ ಕಾರಣ ಭಕ್ತರ ದಟ್ಟಣೆಗೆ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಆಯ್ದ ದಿನಗಳಲ್ಲಿ ನೂಕುನುಗ್ಗಲು ಕಡಿಮೆ ಮಾಡಲು ಅಕ್ಟೋಬರ್ 1, 7, 8, 14 ಮತ್ತು 15ರಂದು ಎಸ್‌ಎಸ್‌ಡಿ ಟೋಕನ್ ವಿತರಣೆಯನ್ನು ರದ್ದುಪಡಿಸಲಾಗಿದೆ ಎಂದು ಟಿಟಿಡಿ ತಿಳಿಸಿದೆ.