ಭೋಪಾಲ್: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವಂತೆ ನಾಲ್ಕು ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು, ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಹೇಳಿದ್ದಾರೆ.
ಭೋಪಾಲ್: ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ನಿಂದ ಟಿಕೆಟ್ ನೀಡುವಂತೆ ನಾಲ್ಕು ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದು, ಎಲ್ಲರಿಗೂ ಟಿಕೆಟ್ ನೀಡಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಕಮಲ್‌ನಾಥ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಟಿಕೆಟ್ ಸಿಗದೆ ನಿರಾಸೆಗೊಂಡ ನಾಯಕರು ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ ಎಂದು ಭಾವಿಸುತ್ತೇನೆ ಎಂದು ಹೇಳಿದರು.
'ಕಾಂಗ್ರೆಸ್ 144 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಇನ್ನೆರಡು ಮೂರು ದಿನಗಳಲ್ಲಿ ಉಳಿದ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಣೆ ಮಾಡಲಿದೆ. ಮೊನ್ನೆ ಆಯ್ಕೆಯಾದ ಅಭ್ಯರ್ಥಿಗಳ ಪೈಕಿ 65 ಮಂದಿ 50 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿದ್ದು, 19 ಮಂದಿ ಮಹಿಳೆಯರಿದ್ದಾರೆ' ಎಂದು ಹೇಳಿದರು.
'ಈ ಚುನಾವಣೆ ರಾಜ್ಯದ ಭವಿಷ್ಯ ನಿರ್ಧರಿಸಲಿದೆ. ಭ್ರಷ್ಟಾಚಾರದಿಂದ ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿದೆ' ಎಂದು ಬಿಜೆಪಿ ವಿರುದ್ಧ ಗುಡುಗಿದರು.
230 ವಿಧಾನಸಭಾ ಸ್ಥಾನಗಳಿಗೆ ನವೆಂಬರ್ 17 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ 144 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆಡಳಿತರೂಢ ಬಿಜೆಪಿ 136 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ.