ನವದೆಹಲಿ: ರೋಜ್‌ಗಾರ್ ಮೇಳದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ವಿಡಿಯೊ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರಿದ 50 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.
ನವದೆಹಲಿ: ರೋಜ್‌ಗಾರ್ ಮೇಳದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ವಿಡಿಯೊ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರಿದ 50 ಸಾವಿರ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ನೀಡಿದರು.
ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, 'ಕಳೆದ ವರ್ಷ ಅಕ್ಟೋಬರ್‌ನಲ್ಲಿ ರೋಜ್‌ಗಾರ್ ಮೇಳವನ್ನು ಪ್ರಾರಂಭಿಸಲಾಗಿದೆ.
ದೇಶಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ. ಈ ಉಪಕ್ರಮವನ್ನು ಬೆಂಬಲಿಸುವ ಕೇಂದ್ರ ಸರ್ಕಾರದ ಇಲಾಖೆಗಳು, ರಾಜ್ಯ ಸರ್ಕಾರಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನೇಮಕಾತಿ ನಡೆಯುತ್ತಿವೆ.
ದೇಶದಾದ್ಯಂತ ಆಯ್ಕೆಯಾದ ಹೊಸ ಅಭ್ಯರ್ಥಿಗಳು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೈಲ್ವೆ ಸಚಿವಾಲಯ, ಅಂಚೆ ಇಲಾಖೆ, ಕಂದಾಯ ಇಲಾಖೆ, ಗೃಹ ಸಚಿವಾಲಯ, ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸೇರಿದಂತೆ ವಿವಿಧ ಸಚಿವಾಲಯಗಳಲ್ಲಿ ಸರ್ಕಾರದ ಸೇವೆಗೆ ಸೇರಲಿದ್ದಾರೆ.