ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಮಹತ್ವದ ಕಾರ್ಯಾಚರಣೆ ನಡೆಸಿರುವ ಭಾರತೀಯ ಸೇನೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿ, 5 ಉಗ್ರರ ಹೆಡೆಮುರಿ ಕಟ್ಟಿದೆ.
ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಮಾತ್ರವಲ್ಲದೇ ಈ ಕಾರ್ಯಾಚರಣೆಯಲ್ಲಿ ಗಡಿಯೊಳಗೆ ನುಸುಳಲು ಯತ್ನಿಸಿದ ಐದು ಮಂದಿ ಅಪರಿಚಿತ ಭಯೋತ್ಪಾದಕರನ್ನು ಹತ ಮಾಡಿದೆ.
ಈ ಬಗ್ಗೆ ಕಾಶ್ಮೀರದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವಿಜಯ್ ಕುಮಾರ್ ಮಾತನಾಡಿ, ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇದುವರೆಗೆ ಐವರು ಉಗ್ಗರು ಸಾವನ್ನಪ್ಪಿದ್ದಾರೆ. ಈ ಪೈಕಿ ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದೆ ಮೂರು ಮಂದಿ ಸೇರಿ ಒಟ್ಟು 5 ಮಂದಿ ಉಗ್ರರನ್ನು ಹತ ಮಾಡಲಾಗಿದೆ ಎಂದರು.
ಅಂತೆಯೇ ಉಗ್ರರ ಗುರುತು ಪತ್ತೆ ಕಾರ್ಯ ಮಾಡಲಾಗುತ್ತಿದ್ದು, ಶೋಧ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ನೀಡಲಾಗುವುದು ಎಂದು ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ.