ಮುಂಬೈ: ನಾಂದೇಡ್ ಸರ್ಕಾರಿ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 7 ಮಂದಿ ಕಳೆದ ರಾತ್ರಿ ಮೃತಪಟ್ಟಿದ್ದಾರೆ. ಇದರೊಂದಿಗೆ ಈ ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ತಲುಪಿದೆ ಎಂದು 'ಎನ್‌ಡಿಟಿವಿ' ಮಂಗಳವಾರ ವರದಿ ಮಾಡಿದೆ.

ಮರಾಠವಾಡದ ಪ್ರಮುಖ ನಗರವಾದ ನಾಂದೇಡ್‌ನ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದೆ.
ಸಾವಿಗೀಡಾದವರ ಒಟ್ಟು ಸಂಖ್ಯೆಯಲ್ಲಿ 16 ನವಜಾತ ಶಿಶುಗಳೂ ಸೇರಿವೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಔಷಧಿಗಳ ಕೊರತೆ ಹಾಗೂ ವೈದ್ಯರ ನಿರ್ಲಕ್ಷ್ಯದಿಂದ ಈ ಆಘಾತಕಾರಿ ಘಟನೆ ನಡೆದಿದೆ ಎಂಬ ಆರೋಪಗಳು ಕೇಳಿಬಂದಿವೆ. ಆದರೆ, ಆಸ್ಪತ್ರೆಯ ವೈದ್ಯ ಡಾ.ಶ್ಯಾಮರಾವ್ ವಾಕೋಡೆ ಈ ಆರೋಪಗಳನ್ನು ಅಲ್ಲಗಳೆದಿದ್ದಾರೆ.
ಆಸ್ಪತ್ರೆಯಲ್ಲಿ ಔಷಧಗಳು ಅಥವಾ ವೈದ್ಯರ ಕೊರತೆ ಇಲ್ಲ ಎಂದಿರುವ ಅವರು, ಸೂಕ್ತ ಚಿಕಿತ್ಸೆ ನೀಡಿದರೂ ರೋಗಿಗಳು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ದುರಂತಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷಗಳು ಏಕನಾಥ ಶಿಂದೆ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ಬಗ್ಗೆ ಪ್ರತಿಕ್ರಿಯಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.