ಮುಂಬೈ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ ₹70 ಕೋಟಿ ಮೌಲ್ಯದ 70 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI)ದ ಅಧಿಕಾರಿಗಳು ವಶಪಡಿಸಿಕೊಂಡಿದ್ದು, ಇಬ್ಬರು ವಿದೇಶಿಗರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಡಿಆರ್‌ಐನ ಮುಂಬೈ ವಲಯ ಘಟಕವು ಒಬ್ಬನಿಂದ ಐದು ಗುಂಡುಗಳುಳ್ಳ ಬಂದೂಕನ್ನು ವಶಪಡಿಸಿಕೊಂಡಿದ್ದು, ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
ಕಳೆದೆರಡು ದಿನಗಳಲ್ಲಿ ನಾಲ್ಕು ಘಟನೆಗಳು ವರದಿಯಾಗಿವೆ. ಬಂಧಿತ ನಾಲ್ವರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ. ಕೊಕೇನ್‌ಅನ್ನು ಟ್ರಾಲಿ ಬ್ಯಾಗ್‌ಗಳಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.