ನವದೆಹಲಿ: ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿ ಕುಟುಂಬವನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭೇಟಿಯಾಗಿದ್ದಾರೆ.
ನವದೆಹಲಿ: ಕತಾರ್‌ನಲ್ಲಿ ಮರಣದಂಡನೆಗೆ ಗುರಿಯಾದ ಭಾರತೀಯ ನೌಕಾಪಡೆಯ ಎಂಟು ಮಂದಿ ಮಾಜಿ ಸಿಬ್ಬಂದಿ ಕುಟುಂಬವನ್ನು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಭೇಟಿಯಾಗಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು 'ಕತಾರ್‌ನಲ್ಲಿ ಬಂಧಿತರಾಗಿರುವ 8 ಭಾರತೀಯರ ಕುಟುಂಬಗಳನ್ನು ಇಂದು ಬೆಳಿಗ್ಗೆ ಭೇಟಿ ಮಾಡಲಾಗಿದೆ. ಸರ್ಕಾರವು ಈ ಸಂಬಂಧ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಕುಟುಂಬಗಳ ಕಳವಳ ಮತ್ತು ನೋವನ್ನು ಹಂಚಿಕೊಳ್ಳಲಿದೆ. ಅವರನ್ನು ಬಿಡುಗಡೆಗೊಳಿಸಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮುಂದುವರಿಸುತ್ತದೆ. ಆ ನಿಟ್ಟಿನಲ್ಲಿ ಕುಟುಂಬಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರಲಿದೆ' ಎಂದಿದ್ದಾರೆ.
ಮರಣದಂಡನೆಗೆ ಗುರಿಯಾದ ಎಂಟೂ ಮಂದಿ ಅಲ್ ದಹ್ರಾ ಕಂಪನಿಯ ನೌಕರರಾಗಿದ್ದರು. ಕಳೆದ ವರ್ಷದ ಆಗಸ್ಟ್‌ನಲ್ಲಿ ಇವರನ್ನು ಶಂಕಿತ ಬೇಹುಗಾರಿಕೆ ಆರೋಪದ ಅಡಿಯಲ್ಲಿ ವಶಕ್ಕೆ ಪಡೆಯಲಾಗಿತ್ತು. ಇವರ ಮೇಲಿನ ಆರೋಪಗಳು ಏನಿದ್ದವು ಎಂಬುದನ್ನು ಕತಾರ್ ಬಹಿರಂಗಪಡಿಸಿಲ್ಲ.