ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 2023 ಮಾರ್ಚ್‌ವರೆಗೆ ₹900 ಕೋಟಿ ಖರ್ಚು ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.
ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರಕ್ಕೆ 2023 ಮಾರ್ಚ್‌ವರೆಗೆ ₹900 ಕೋಟಿ ಖರ್ಚು ಮಾಡಲಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.
ರಾಮಮಂದಿರ ನಿರ್ಮಾಣಕ್ಕೆ 2020 ಫೆಬ್ರುವರಿ 5ರಿಂದ 2023 ಮಾರ್ಚ್ 31ರವರೆಗೆ ₹900 ಕೋಟಿ ಖರ್ಚು ಮಾಡಲಾಗಿದ್ದು, ಇನ್ನೂ ₹3,000 ಕೋಟಿ ಬ್ಯಾಂಕ್ ಖಾತೆಯಲ್ಲಿ ಹೊಂದಿದೆ ಎಂದು ಟ್ರಸ್ಟ್ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ನಡೆದ ಸಭೆಯಲ್ಲಿ ವಿದೇಶಿ ಕರೆನ್ಸಿ ದೇಣಿಗೆ ಸ್ವೀಕಾರದ ಪ್ರಕ್ರಿಯೆ ಸೇರಿದಂತೆ 18 ಅಂಶಗಳ ಕುರಿತು ಚರ್ಚೆ ನಡೆಸಲಾಗಿದೆ ಎಂದು ಕಾರ್ಯದರ್ಶಿ ಚಂಪತ್ ರಾಯ್ ತಿಳಿಸಿದ್ದಾರೆ.
ಅಯೋಧ್ಯೆ ರಾಮ ಮಂದಿರದಲ್ಲಿ ಮುಂದಿನ ವರ್ಷ ಜನವರಿ 22ರಂದು ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯುವ ನಿರೀಕ್ಷೆಯಿದ್ದು, ಇದಕ್ಕಾಗಿ ಸಮಿತಿ ರಚಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 10,000 ಗಣ್ಯರು ಭಾಗಿಯಾಗುವ ಸಾಧ್ಯತೆಯಿದೆ.
2025 ಜನವರಿ ವೇಳೆಗೆ ಮೂರು ಹಂತಗಳಲ್ಲಿ ಮಂದಿರದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ.