ನವದೆಹಲಿ: ಚಳಿಗಾಲದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಸೋಮವಾರ(ಅ.16) ನಗರದ ಈಶಾನ್ಯ ದೆಹಲಿಯ ಗರ್ಹಿ ಮಾಂಡುವಿನಲ್ಲಿ 2ನೇ ಹಂತದ ನೆಡುತೋಪು ನಿರ್ಮಾಣ ಅಭಿಯಾನಕ್ಕೆ ಚಾಲನೆ ನೀಡಿದರು.
ನವದೆಹಲಿ: ಚಳಿಗಾಲದಲ್ಲಿ ಮಾಲಿನ್ಯವನ್ನು ಕಡಿಮೆ ಮಾಡುವ ಪ್ರಯತ್ನದ ಭಾಗವಾಗಿ ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಸೋಮವಾರ(ಅ.16) ನಗರದ ಈಶಾನ್ಯ ದೆಹಲಿಯ ಗರ್ಹಿ ಮಾಂಡುವಿನಲ್ಲಿ 2ನೇ ಹಂತದ ನೆಡುತೋಪು ನಿರ್ಮಾಣ ಅಭಿಯಾನಕ್ಕೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, 'ಕಳೆದ 8 ವರ್ಷಗಳಲ್ಲಿ ಹಸಿರು ಹೊದಿಕೆಯ ಹೆಚ್ಚಳವು ರಾಷ್ಟ್ರ ರಾಜಧಾನಿಯ ಗಾಳಿಯ ಗುಣಮಟ್ಟವನ್ನು ಸುಧಾರಿಸಿದೆ.
ನವದೆಹಲಿ ಮುನ್ಸಿಪಲ್ ಕೌನ್ಸಿಲ್ 50 ಲಕ್ಷ ಸಸಿಗಳನ್ನು ನೆಡುವ ಅಭಿಯಾನದ ಬಗ್ಗೆ ಶ್ಲಾಘಿಸಿದ ಅವರು, ನಗರದಲ್ಲಿ ಹಸಿರು ಹೊದಿಕೆಯನ್ನು ಹೆಚ್ಚಿಸಲು ಇದು ಸಹಾಯ ಮಾಡುತ್ತದೆ. ಎಎಪಿ ಸರ್ಕಾರದ ಅವಧಿಯಲ್ಲಿ ದೆಹಲಿಯ ಹಸಿರು ಹೊದಿಕೆಯು ಶೇ.20 ರಿಂದ ಶೇ.23ಕ್ಕೆ ಏರಿದೆ. ಇದು ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಗೆ ಕಾರಣವಾಯಿತು ಎಂದು ಅವರು ಹೇಳಿದರು.