ನವದೆಹಲಿ: ಉದ್ಯಮಿಯೊಬ್ಬರಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು, ಒಂದು ವೇಳೆ ವಿಚಾರಣೆಗೆ ಕರೆದರೆ ಸಿಬಿಐ ಅಥವಾ ಸದನದ ನೀತಿ ನಿಯಮ ಸಮಿತಿ ಮುಂದೆ ಹಾಜರಾಗಿ ಉತ್ತರಿಸುತ್ತೇನೆ ಎಂದು ಹೇಳಿದ್ದಾರೆ.

'ವಿಚಾರಣೆಗೆ ಕರೆದರೆ ಬಿಜೆಪಿ ಸದಸ್ಯರೇ ಹೆಚ್ಚಿರುವ ಸಮಿತಿ ಮುಂದೆ ಹಾಜರಾಗುತ್ತೇನೆ. ಅದಾನಿ ನಿರ್ದೇಶಿತ ಮಾಧ್ಯಮ ಹಾಗೂ ಬಿಜೆಪಿಯ ಟ್ರೋಲ್‌ಗಳಿಗೆ ಉತ್ತರಿಸಲು ನನ್ನ ಬಳಿ ಸಮಯವಿಲ್ಲ. ನಾನು ನಾಡಿಯಾದಲ್ಲಿ ದುರ್ಗಾ ಪೂಜೆಯ ಸಂಭ್ರಮದಲ್ಲಿದ್ದೇನೆ. ಶುಭೋ ಶಾಂತಿ' ಎಂದು ಮಹುವಾ ಮೊಯಿತ್ರಾ 'ಎಕ್ಸ್'ನಲ್ಲಿ ಬರೆದುಕೊಂಡಿದ್ದಾರೆ.
ಪಶ್ಚಿಮ ಬಂಗಾಳದ ಕೃಷ್ಣನಗರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಮಹುವಾ ಮೊಯಿತ್ರಾ ಅವರು ಸದನದಲ್ಲಿ ಪ್ರಶ್ನೆಗಳನ್ನು ಕೇಳಲು ಉದ್ಯಮಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಆರೋಪಿಸಿದ್ದರು. ಅಲ್ಲದೆ ಈ ಬಗ್ಗೆ ತನಿಖಾ ಸಮಿತಿ ರಚನೆ ಮಾಡಬೇಕು ಎಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಿದ್ದರು.
ಅದಾನಿ ಸಮೂಹದ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಮಾಡಲು ಹೀರಾನಂದಾನಿ ಸಮೂಹದ ಸಿಇಒ ದರ್ಶನ್ ಹೀರಾನಂದಾನಿ ಅವರಿಂದ ಮಹುವಾ ಲಂಚ ಪಡೆದಿದ್ದರು. ಗೌತಮ್ ಅದಾನಿಯನ್ನು ಗುರಿಯಾಗಿಸಿಕೊಂಡು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೆಡುಕು ಹಾಗೂ ಮುಜುಗರ ಉಂಟು ಮಾಡಲು ಪ್ರಯತ್ನಿಸಿದ್ದರು ಎಂದು ದುಬೆ ಅವರು ಸ್ಪೀಕರ್‌ಗೆ ಸಲ್ಲಿಸಿದ್ದ ಅಫಿಡವಿಟ್‌ನಲ್ಲಿ ದೂರಿದ್ದಾರೆ.
ದುಬೆ ಅವರ ದೂರನ್ನು, ಸ್ಪೀಕರ್ ಓಂ ಬಿರ್ಲಾ ಅವರು ನೀತಿ ನಿಯಮ ಸಮಿತಿಗೆ ಒಪ್ಪಿಸಿದ್ದಾರೆ.