ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಿಂದಾಗಿ ಇಸ್ರೇಲ್ ನಲ್ಲಿ ಸಿಲುಕಿರುವ ಭಾರತೀಯರನ್ನು ಮರಳಿ ಕರೆತರಲು ಏರ್ ಇಂಡಿಯಾ ಮತ್ತು ಸ್ಪೈಸ್ ಜೆಟ್ ನ ತಲಾ ಒಂದು ವಿಮಾನವನ್ನು ಟೆಲ್ ಅವೀವ್‌ಗೆ ಹಾರಾಟ ನಡೆಸಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಪರೇಷನ್ ಅಜಯ್ ಅಡಿಯಲ್ಲಿ ಈ ಚಾರ್ಟರ್ಡ್ ಫ್ಲೈಟ್‌ಗಳನ್ನು ನಿರ್ವಹಿಸಲಾಗುವುದು. ಇದು ಇಸ್ರೇಲ್‌ನಿಂದ ಭಾರತಕ್ಕೆ ಹಿಂತಿರುಗಲು ಬಯಸುವವರಿಗೆ ಅನುಕೂಲವಾಗಲಿ ಎಂದು ಸರ್ಕಾರ ಆಪರೇಷನ್ ಅಜಯ್ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ.
ಏರ್ ಇಂಡಿಯಾ ನವದೆಹಲಿಯಿಂದ ಟೆಲ್ ಅವೀವ್‌ಗೆ ಹಾರಾಟ ನಡೆಸಲಿದೆ. ಇನ್ನು ಸ್ಪೈಸ್‌ಜೆಟ್ ಅಮೃತಸರದಿಂದ ಟೆಲ್ ಅವೀವ್‌ಗೆ ಹಾರಾಟ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ವಿಮಾನಗಳು ಭಾನುವಾರ ಬೆಳಿಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿಯುವ ನಿರೀಕ್ಷೆಯಿದೆ. ಏರ್ ಇಂಡಿಯಾ ಭಾನುವಾರ ಟೆಲ್ ಅವೀವ್‌ಗೆ ಮತ್ತೊಂದು ವಿಮಾನವನ್ನು ಕಳುಹಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.