ಕಾಸರಗೋಡು : ತೆಂಕುತಿಟ್ಟಿನ ಯಕ್ಷಗಾನ ಕ್ಷೇತ್ರದಲ್ಲಿ ಪ್ರಸಿದ್ಧ ಶ್ರೀವೆಂಕಟ್ರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ 6ನೇ ವರ್ಷದ ಕಾಸರಗೋಡು ಯಕ್ಷೋತ್ಸವ ಪೇಟೆ ಶ್ರೀ ವೆಂಕಟ್ರಮಣ ದೇವಸ್ಥಾನದ ವಠಾರದಲ್ಲಿ ಜರುಗಿತು.
ಯಕ್ಷೋತ್ಸವವನ್ನು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣ ಅಸ್ರ ಉದ್ಘಾಟಿಸಿದರು. ಖ್ಯಾತ ವೈದ್ಯ ಡಾ.ಜನಾರ್ದನ ನಾಯ್ಕ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಭವನದ ಸಂಸ್ಥಾಪಕ ವಾಮನ ರಾವ್ ಬೇಕಲ್, ನಾಟ್ಯಾಲಯದ ನಿರ್ದೇಶಕಿ ಸಿಂಧು ಬಾಸ್ಕರನ್, ಕಾಸರಗೋಡು ಬ್ಲೋಕ್ ಪಂಚಾಯಿತಿ ಸದಸ್ಯ ಸುಕುಮಾರ ಕುದ್ರೆಪ್ಪಾಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಈ ಸಂದರ್ಭ ಯಕ್ಷಗಾನ ಕಲಾವಿದ, ಬೆನಕ ಪ್ರಸಾದನ ತಂಡದ ಮುಖ್ಯಸ್ಥ ಕೃಷ್ಣ ಭಟ್ ದೇವಕಾನ ಅವರನ್ನು ಗೌರವಿಸಲಾಯಿತು. ಯಕ್ಷಗಾನ ಕಲಾವಿದೆ ಚಂದ್ರಿಕಾ ಭಟ್ ಮವ್ವಾರು ಸನ್ಮಾನಪತ್ರ ವಾಚಿಸಿದರು. ಶ್ರೀವೆಂಕಟರಮಣ ಸ್ವಾಮಿ ಕೃಪಾಶ್ರಿತ ಯಕ್ಷಗಾನ ಕಲಾ ಸಂಘದ ಅಧ್ಯಕ್ಷ ಕೆ.ಎನ್. ವೆಂಕಟರಮಣ ಹೊಳ್ಳ ಪ್ರಾಸ್ತವಿಕವಾಗಿ ಮಾತುಗಳನ್ನಾಡಿದರು. ಭಾಗವತ ಪ್ರಖ್ಯಾತ್ ಶೆಟ್ಟಿ ಪ್ರಾರ್ಥನೆ ಹಾಡಿದರು. ಯಕ್ಷಗಾನ ತರಬೇತಿ ಕೇಂದ್ರದ ಅಧ್ಯಕ್ಷ ಕೆ.ಎನ್. ರಾಮಕೃಷ್ಣ ಹೊಳ್ಳ ಸ್ವಾಗತಿಸಿದರು. ಜಗದೀಶ್ ಕೂಡ್ಲು ನಿರೂಪಿಸಿದರು. ಕಿಶೋರ್ ಕೂಡ್ಲು ವಂದಿಸಿದರು. ಈ ಸಂದರ್ಭ ರಾಕೇಶ್ ರೈ ಅಡ್ಕ ಅವರ ನಿರ್ದೇಶನದಲ್ಲಿ ಇಂದ್ರಜಿತು ಕಾಳಗ-ತರಣಿಸೇನ ಕಾಳಗ ಯಕ್ಷಗಾನ ಪ್ರದರ್ಶನಗೊಂಡಿತು.