ನವದೆಹಲಿ: ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ(ಎಫ್‌ಸಿಆರ್‌ಎ) ಉಲ್ಲಂಘಿಸಿ ವಿದೇಶದಿಂದ ಹಣ ಪಡೆಯಲಾಗಿದೆ ಎಂಬ ಆರೋಪದ ಮೇಲೆ ತನಿಖೆ ಆರಂಭಿಸಿರುವ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ), ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಅವರ ನಿವಾಸ ಮತ್ತು ಕಚೇರಿ ಮೇಲೆ ದಾಳಿ ನಡೆಸಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್‌ಐಆರ್ ದಾಖಲಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚೀನಾದಿಂದ ಹಣ ಪಡೆದುಕೊಂಡು ಭಾರತ ವಿರೋಧಿ ಅಭಿಯಾನವನ್ನು ಸಂಸ್ಥೆ ನಡೆಸುತ್ತಿದೆ. ಇದಕ್ಕಾಗಿ ಅಮೆರಿಕದ ಕೋಟ್ಯಧೀಶ ನೆವಿಲ್ಲೆ ರಾಮ್ ಸಿಂಘಂ ಎಂಬುವರು ನ್ಯೂಸ್‌ಕ್ಲಿಕ್ ಮೇಲೆ ಹಣ ಹೂಡಿಕೆ ಮಾಡಿದ್ದಾರೆ ಎಂಬ ಆರೋಪ ಮೇಲೆ ಅ.3ರಂದು ಪ್ರಬೀರ್ ಪುರಕಾಯಸ್ಥ ಅವರನ್ನು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿಯಲ್ಲಿ (ಯುಎಪಿಎ) ದೆಹಲಿ ಪೊಲೀಸರು ಬಂಧಿಸಿದ್ದರು.
ಈ ಎಲ್ಲ ಆರೋಪಗಳನ್ನು ಸಂಸ್ಥೆ ತಳ್ಳಿ ಹಾಕಿದೆ.