ನವದೆಹಲಿ : ಶಸ್ತ್ರ ಚಿಕಿತ್ಸೆಯ ನೇರ ಪ್ರಸಾರದಿಂದ ಎದುರಾಗುವ ಕಾನೂನು ಮತ್ತು ನೈತಿಕ ಸಮಸ್ಯೆಗಳನ್ನು ಉಲ್ಲೇಖಿಸಿ ಸಲ್ಲಿಕೆಯಾಗಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಕೇಂದ್ರ ಸರ್ಕಾರ ಮತ್ತು ಇತರರಿಗೆ ನಿರ್ದೇಶನ ನೀಡಿದೆ.

ದೆಹಲಿಯ ಕೆಲವರು ಸಲ್ಲಿಸಿರುವ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ನ್ಯಾಯಪೀಠವು ಕೇಂದ್ರ ಸರ್ಕಾರ, ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‌ಎಂಸಿ) ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.
ಶಸ್ತ್ರಚಿಕಿತ್ಸೆಯ ನೇರ ಪ್ರಸಾರವನ್ನು ನಿಯಮಿತವಾಗಿ ಮೇಲ್ವಿಚಾರಣೆ ನಡೆಸಲು ಸಮಿತಿಯನ್ನು ರಚಿಸಲು ಹಾಗೂ ಮಾರ್ಗಸೂಚಿಗಳನ್ನು ರೂಪಿಸಲು ಎನ್‌ಎಂಸಿಗೆ ನಿರ್ದೇಶನ ನೀಡಬೇಕೆಂದು ಅರ್ಜಿದಾರರು ಕೋರಿರುವುದಾಗಿ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೂ ಒಳಗೊಂಡಿರುವ ನ್ಯಾಯಪೀಠ ಹೇಳಿದೆ.
ಈ ಕುರಿತು ಮೂರು ವಾರಗಳ ಬಳಿಕ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಹೇಳಿದೆ.