HEALTH TIPS

ನವಜೀವನ ಶಾಲೆಯಲ್ಲಿ ಸಾಧಕರ ಜನ್ಮದಿನಾಚರಣೆ

               ಬದಿಯಡ್ಕ : ಇಲ್ಲಿನ ಪೆರಡಾಲ ನವಜೀವನ ಪ್ರೌಢಶಾಲೆಯಲ್ಲಿ ಮಂಗಳವಾರದಂದು ತುಳುಲಿಪಿ ಬ್ರಹ್ಮ ಡಾ. ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ ಹಾಗೂ ಕಡಲ ತಡಿಯ ಭಾರ್ಗವ ಕೋಟ ಶಿವರಾಮ ಕಾರಂತರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಈ ಎರಡೂ ಸಾಧಕರ ಭಾವಚಿತ್ರಕ್ಕೆ ಶಾಲೆಯ ಮಕ್ಕಳು ಪುಷ್ಪಾರ್ಚನೆ ಮಾಡಿದರು. 


             ಸಭೆಯ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ಮಿನಿ ಟೀಚರ್ ವಹಿಸಿದ್ದರು. ಪ್ರೌಢಶಾಲಾ ಶಿಕ್ಷಕಿ ಸರ್ವಮಂಗಳ ಪಿ ಸ್ವಾಗತಿಸಿದರು. ಶ್ರೀನಿವಾಸ ಮಾಸ್ತರ್ ವಂದಿಸಿದರು. ಶಿಕ್ಷಕಿ ಪುಂಡೂರು ಪ್ರಭಾವತಿ ಕೆದಿಲಾಯ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭದಲ್ಲಿ ಡಾ. ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ ಹಾಗೂ ಕಡಲ ತಡಿಯ ಭಾರ್ಗವ ಕೋಟ ಶಿವರಾಮ ಕಾರಂತರ ತುಳು ಮತ್ತು ಕನ್ನಡ ಭಾಷೆಯ ಸಾಹಿತ್ಯದ ವಾಚನ ನಡೆಯಿತು. ಕಾರ್ಯಕ್ರಮದಲ್ಲಿ ಶಾಲೆಯ ಅನೇಕ ಮಕ್ಕಳು ಭಾಗವಹಿಸಿದ್ದರು. 


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries