ಶಿಮ್ಲಾ: ಅನಾರೋಗ್ಯ ಹಿನ್ನೆಲೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವೀಂದರ್ ಸಿಂಗ್ ಸುಖು ಅವರು ಬುಧವಾರ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ.
ಬುಧವಾರ ತಡರಾತ್ರಿ ಮುಖ್ಯಮಂತ್ರಿಗಳಿಗೆ ಇದ್ದಕ್ಕಿದ್ದಂತೆ ಅತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ ವರದಿಗಳು ತಿಳಿಸಿವೆ.
ವೈದ್ಯಕೀಯ ವರದಿಗಳು ಸಾಮಾನ್ಯವಾಗಿದ್ದು, ಆರೋಗ್ಯ ಸ್ಥಿರವಾಗಿದೆ. ವೈದ್ಯಕೀಯ ತಂಡ ಮುಖ್ಯಮಂತ್ರಿಗಳ ಆರೋಗ್ಯದ ಮೇಲೆ ನಿಗಾ ಇರಿಸಿದೆ ಎಂದು ವೈದ್ಯರು ಹೇಳಿದ್ದಾರೆ.