ಇಂಫಾಲ: ಭಾರತ-ಮ್ಯಾನ್ಮಾರ್ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ದೈನಂದಿನ ಕರ್ಫ್ಯೂ ಮುಂದುವರಿಸಿ ಮಣಿಪುರದ ತೆಂಗ್ನೌಪಾಲ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಇಂಫಾಲ: ಭಾರತ-ಮ್ಯಾನ್ಮಾರ್ ಗಡಿ ಪಟ್ಟಣವಾದ ಮೊರೆಹ್‌ನಲ್ಲಿ ದೈನಂದಿನ ಕರ್ಫ್ಯೂ ಮುಂದುವರಿಸಿ ಮಣಿಪುರದ ತೆಂಗ್ನೌಪಾಲ್ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಪ್ರತಿದಿನ ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಸಾರ್ವಜನಿಕರಿಗೆ ಔಷಧಿ ಮತ್ತು ಆಹಾರ ಸೇರಿದಂತೆ ಅಗತ್ಯ ವಸ್ತುಗಳನ್ನು ಖರೀದಿಸಲು ಅನುಕೂಲವಾಗುವಂತೆ ಕರ್ಫ್ಯೂ ಸಡಿಲಿಸಲಾಗಿತ್ತು.
ಆದರೆ, ಜಿಲ್ಲೆಯ ಉಳಿದ ಭಾಗಗಳಲ್ಲಿ ಕರ್ಫ್ಯೂ ಸಡಿಲಿಕೆಯು ಬೆಳಿಗ್ಗೆ 6ರಿಂದ ಸಂಜೆ 5ರವರೆಗೆ ಯಥಾಸ್ಥಿತಿಯಲ್ಲಿ ಇರಲಿದೆ. ಕಾನೂನು ಮತ್ತು ಸುವ್ಯವಸ್ಥೆ ಜಾರಿಯಲ್ಲಿ ತೊಡಗಿರುವ ಸರ್ಕಾರಿ ಸಂಸ್ಥೆಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.