ನವದೆಹಲಿ: ದೆಹಲಿ ಹೈಕೋರ್ಟ್‌ನಲ್ಲಿ ಇಂದು (ಶುಕ್ರವಾರ) ಇಬ್ಬರು ಹೊಸ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದರು.
ನವದೆಹಲಿ: ದೆಹಲಿ ಹೈಕೋರ್ಟ್‌ನಲ್ಲಿ ಇಂದು (ಶುಕ್ರವಾರ) ಇಬ್ಬರು ಹೊಸ ನ್ಯಾಯಮೂರ್ತಿಗಳು ಪ್ರಮಾಣ ವಚನ ಸ್ವೀಕರಿಸಿದರು.
ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ, ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕವಾದ ಶಾಲಿಂದರ್ ಕೌರ್ ಮತ್ತು ರವೀಂದರ್ ದುಡೇಜಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಕಾನೂನು ಮತ್ತು ನ್ಯಾಯ ಸಚಿವಾಲಯ ಅ.16, 2023ರಂದು ಈ ಕುರಿತು ಅಧಿಸೂಚನೆ ಹೊರಡಿಸಿತ್ತು. ಸುಪ್ರೀಂ ಕೋರ್ಟ್ ಕೊಲಿಜಿಯಂ ಇತ್ತೀಚೆಗೆ ಶಾಲಿಂದರ್ ಕೌರ್ ಮತ್ತು ರವೀಂದರ್ ದುಡೇಜಾ (ನ್ಯಾಯಾಂಗ ಅಧಿಕಾರಿಗಳು) ಹೆಸರನ್ನು ದೆಹಲಿಯ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡಲು ಶಿಫಾರಸು ಮಾಡಿತ್ತು.
ಮೇ 2023ರಂದು, ದೆಹಲಿಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ತಮ್ಮ ಇಬ್ಬರು ಹಿರಿಯ-ಸಹೋದ್ಯೋಗಿಗಳೊಂದಿಗೆ ಸಮಾಲೋಚಿಸಿ ಈ ನ್ಯಾಯಾಂಗ ಅಧಿಕಾರಿಗಳನ್ನು ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ಉನ್ನತೀಕರಿಸಲು ಶಿಫಾರಸು ಮಾಡಿದರು ಎಂದು ಕೊಲಿಜಿಯಂ ಹೇಳಿದೆ.