ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಲೆಜಂಡರಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ಸೋಮವಾರ ವಿಧಿವಶರಾಗಿದ್ದಾರೆ. ಮೃತರಿಗೆ 77 ವರ್ಷ ವಯಸ್ಸಾಗಿತ್ತು.
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಲೆಜಂಡರಿ ಸ್ಪಿನ್ನರ್ ಬಿಷನ್ ಸಿಂಗ್ ಬೇಡಿ ಸೋಮವಾರ ವಿಧಿವಶರಾಗಿದ್ದಾರೆ. ಮೃತರಿಗೆ 77 ವರ್ಷ ವಯಸ್ಸಾಗಿತ್ತು.
1946 ಸೆಪ್ಟೆಂಬರ್ 25ರಂದು ಪಂಜಾಬಿನ ಅಮೃತಸರದಲ್ಲಿ ಜನಿಸಿದ ಇವರು, ತಮ್ಮ ಕ್ರಿಕೆಟ್ ಜೀವನದ ಸಾಧನೆಗಾಗಿ 1970ರಲ್ಲಿ ಪದ್ಮಶ್ರೀ ಹಾಗೂ 2004ರಲ್ಲಿ ಸಿ.ಕೆ.ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಎಡಗೈ ಸ್ಪಿನ್ನರ್‌ಗಳಲ್ಲಿ ಒಬ್ಬರೆಂದು ಬಿಷನ್ ಸಿಂಗ್ ಬೇಡಿ ಅವರನ್ನು ಪರಿಗಣಿಸಲಾಗಿದೆ. 1967 ರಿಂದ 1979 ಭಾರತವನ್ನು ಪ್ರತಿನಿಧಿಸಿದ ಅವರು 67 ಟೆಸ್ಟ್ ಮತ್ತು 10 ಏಕದಿನ ಪಂದ್ಯಗಳನ್ನು ಆಡಿದ್ದಾರೆ. 1971ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತವನ್ನು ಮುನ್ನಡೆಸಿದ್ದರು.
ಟೆಸ್ಟ್ ಕ್ರಿಕೆಟ್‌ನಲ್ಲಿ 28.71 ಸರಾಸರಿಯಲ್ಲಿ 266 ವಿಕೆಟ್ಗಳನ್ನು ಪಡೆದಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 7 ವಿಕೆಟ್ಗಳನ್ನು ಪಡೆದಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 14 ಬಾರಿ ಐದು ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ. ಬಿಷನ್ ಸಿಂಗ್ ಬೇಡಿ ನಿಧನಕ್ಕೆ ಕ್ರಿಕೆಟಿಗರು, ರಾಜಕೀಯ, ಸಿನಿಮಾ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.