ನವದೆಹಲಿ: ಗಾಜಾ ನಗರದ ಆಸ್ಪತ್ರೆ ಮೇಲೆ ನಡೆದ ದಾಳಿಯಲ್ಲಿ ಉಂಟಾದ ಪ್ರಾಣಹಾನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪ್ಯಾಲೆಸ್ಟೀನ್ ನಾಗರಿಕರಿಗೆ ಮಾನವೀಯ ನೆರವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.
ನವದೆಹಲಿ: ಗಾಜಾ ನಗರದ ಆಸ್ಪತ್ರೆ ಮೇಲೆ ನಡೆದ ದಾಳಿಯಲ್ಲಿ ಉಂಟಾದ ಪ್ರಾಣಹಾನಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಅಲ್ಲದೆ ಪ್ಯಾಲೆಸ್ಟೀನ್ ನಾಗರಿಕರಿಗೆ ಮಾನವೀಯ ನೆರವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ಯಾಲೆಸ್ಟೀನ್ ಅಧ್ಯಕ್ಷ ಎಚ್.ಇ. ಮಹಮ್ಮದ್ ಅಬ್ಬಾಸ್ ಅವರೊಂದಿಗೆ ಮಾತನಾಡಿದ್ದೇನೆ. ಗಾಜಾದ ಅಲ್ ಅಹ್ಲಿ ಆಸ್ಪತ್ರೆಯಲ್ಲಿ ನಾಗರಿಕರ ಪ್ರಾಣಹಾನಿಗೆ ಸಂತಾಪವನ್ನು ಸೂಚಿಸಿದ್ದೇನೆ. ನಾವು ಪ್ಯಾಲೆಸ್ಟೀನ್ ಜನರಿಗೆ ಮಾನವೀಯ ನೆಲೆಯಲ್ಲಿ ನೆರವು ನೀಡುವುದನ್ನು ಮುಂದುವರಿಸಲಿದ್ದೇವೆ ಎಂದು ಅವರು ಹೇಳಿದ್ದಾರೆ.
ಅದೇ ಹೊತ್ತಿಗೆ ಈ ಪ್ರದೇಶದಲ್ಲಿ ಭಯೋತ್ಪಾದನೆ, ಹಿಂಸಾಚಾರ ಮತ್ತು ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ಪ್ರಧಾನಿ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಇಸ್ರೇಲ್-ಪ್ಯಾಲೆಸ್ಟೀನ್ ವಿಷಯದಲ್ಲಿ ಭಾರತದ ದೀರ್ಘಕಾಲದ ನಿಲುವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.