ಬಳಕೆದಾರರು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಾದರಿ ಪರೀಕ್ಷಾ ಸಂದೇಶವನ್ನು ಸ್ವೀಕರಿಸಿದ್ದಾರೆ. ಐಪೋನ್ ಬಳಕೆದಾರರು 11:30 ರ ಸುಮಾರಿಗೆ ಧ್ವನಿ ಸಂದೇಶವನ್ನು ಸ್ವೀಕರಿಸಿದ್ದಾರೆ. ಭೂಕಂಪ, ಸುನಾಮಿ ಮತ್ತು ಪ್ರವಾಹದಂತಹ ನೈಸರ್ಗಿಕ ವಿಕೋಪಗಳ ಬಗ್ಗೆ ಎಚ್ಚರಿಕೆ ನೀಡಲು ಕೇಂದ್ರ ಸರ್ಕಾರ ಈ ವ್ಯವಸ್ಥೆಯನ್ನು ಪರಿಚಯಿಸಿದೆ. ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಬರುವ ತಿಂಗಳುಗಳಲ್ಲಿ ವ್ಯವಸ್ಥೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಇದರೊಂದಿಗೆ ದೇಶದ ಜನತೆಗೆ ಪ್ರಕೃತಿ ವಿಕೋಪದ ಕುರಿತು ದೂರವಾಣಿ ಮೂಲಕ ಮಾಹಿತಿ ನೀಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಈ ಹಿಂದೆ ಕೇಂದ್ರ ಸರ್ಕಾರವು ಆ್ಯಂಡ್ರಾಯ್ಡ್ ಪೋನ್‍ಗಳಲ್ಲಿಯೂ ಇಂತಹ ಎಚ್ಚರಿಕೆ ವ್ಯವಸ್ಥೆಯನ್ನು ಪ್ರಯೋಗಿಸಿತ್ತು.
ದೇಶದ ಜನರ ಸುರಕ್ಷತೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಕ ದೇಶವ್ಯಾಪಿ ತುರ್ತು ಸಂದರ್ಭದಲ್ಲಿ ಎಚ್ಚರಿಕೆಯ ಸಂದೇಶ ನೀಡುವ ಪ್ರಯೋಗ ನಡೆಸಿರುವುದಾಗಿ ಇಲಾಖೆ ಹೇಳಿದೆ. ಇಂಥ ಪ್ರಯೋಗಗಳನ್ನು ಹಲವು ಪ್ರದೇಶಗಳಲ್ಲಿ ಹಾಗೂ ಬೇರೆ ಬೇರೆ ಸಮಯಗಳಲ್ಲಿ ನಡೆಸಲಾಗುವುದು. ಆ ಮೂಲಕ ಸಂದೇಶ ಕಳುಹಿಸುವ ವ್ಯವಸ್ಥೆ ಮತ್ತು ಅದರ ಪರಿಣಾಮಗಳ ಕುರಿತು ಪರೀಕ್ಷೆಗಳನ್ನು ನಡೆಸಲಾಗುವುದು ಎಂದಿದೆ.