ಬದಿಯಡ್ಕ: ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಾಂಸ್ಕøತಿಕ ಘಟಕ ಮತ್ತು ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯದ ಆಶ್ರಯದಲ್ಲಿ ಕಾಸರಗೋಡು ದಸರಾ ಸಾಂಸ್ಕøತಿಕೋತ್ಸವದ ಅಂಗವಾಗಿ ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ದುರ್ಗಾಂಬಾ ವೇದಿಕೆಯಲ್ಲಿ ಅ.22 ರಂದು ನಡೆಯುವ ಕಾಸರಗೋಡು ದಸರಾ ಸಾಹಿತ್ಯ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಎಡನೀರು ಮಠಾಧೀಶರಾದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಬಿಡುಗಡೆಗೊಳಿಸಿದರು. ಕನ್ನಡ ಭವನ ಅಧ್ಯಕ್ಷ ವಾಮನ ರಾವ್ ಬೇಕಲ್, ಧಾರ್ಮಿಕ ಮುಂದಾಳು ವೆಂಕಟ್ರಮಣ ಹೊಳ್ಳ, ಸಂಧ್ಯಾರಾಣಿ ಟೀಚರ್, ವಸಂತ ಕೆರೆಮನೆ, ಪ್ರದೀಪ್ ಬೇಕಲ್ ಉಪಸ್ಥಿತರಿದ್ದರು.