ತಿರುವನಂತಪುರಂ: ರಾಜ್ಯ ಮಕ್ಕಳ ಕಲ್ಯಾಣ ಸಮಿತಿಯ ಪೋಷಕ ಸ್ಥಾನಕ್ಕೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ರಾಜೀನಾಮೆ ನೀಡಿದ್ದಾರೆ. ಮಕ್ಕಳ ಕಲ್ಯಾಣ ಸಮಿತಿಯಲ್ಲಿನ ಭ್ರಷ್ಟಾಚಾರ ಮತ್ತು ದುರಾಡಳಿತವನ್ನು ವಿರೋಧಿಸಿ ರಾಜೀನಾಮೆ ನೀಡುತ್ತಿರುವುದಾಗಿ ರಾಜಭವನ ಸರ್ಕಾರಕ್ಕೆ ಲಿಖಿತವಾಗಿ ತಿಳಿಸಿದೆ.
ಮಕ್ಕಳ ಕಲ್ಯಾಣ ಸಮಿತಿಯಲ್ಲಿ ಭ್ರಷ್ಟಾಚಾರ ಮತ್ತು ದುರಾಡಳಿತದ ಬಗ್ಗೆ ರಾಜಭವನಕ್ಕೆ ಈ ಹಿಂದೆ ಹಲವು ದೂರುಗಳು ಬಂದಿದ್ದವು. ಇದರ ಆಧಾರದ ಮೇಲೆ ರಾಜ್ಯಪಾಲರು ತನಿಖೆ ನಡೆಸಿ ಈ ದೂರುಗಳು ನಿಜವೆಂದು ಕಂಡು ಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸÀರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿತ್ತು. ಆದರೆ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ. ಇದನ್ನು ವಿರೋಧಿಸಿ ರಾಜ್ಯಪಾಲರು ರಾಜೀನಾಮೆ ನೀಡಿದ್ದಾರೆ.
ಕೆಲ ದಿನಗಳ ಹಿಂದೆ ರಾಜ್ಯಪಾಲರು ಸರ್ಕಾರಕ್ಕೆ ಲಿಖಿತ ಪತ್ರ ನೀಡಿ ರಾಜೀನಾಮೆ ನೀಡುವುದಾಗಿ ಸೂಚಿಸಿದ್ದರು. ಆದರೆ ರಾಜ್ಯಪಾಲರ ಈ ಪತ್ರಕ್ಕೂ ಸÀರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮಕ್ಕಳ ಕಲ್ಯಾಣ ಸಮಿತಿಯ ವೆಬ್‍ಸೈಟ್‍ನಲ್ಲಿ ರಾಜ್ಯಪಾಲರ ಚಿತ್ರ ಇನ್ನೂ ಲಭ್ಯವಿದೆ. ರಾಜಭವನ ತೆಗೆದಿಲ್ಲ ಎಂಬ ಅಸಮಾಧಾನವೂ ಇದೆ. ಏತನ್ಮಧ್ಯೆ, ಈ ಬಗ್ಗೆ ರಾಜಭವನ ಅಧಿಕೃತ ವಿವರಣೆಯನ್ನು ನೀಡಿಲ್ಲ.