ಹೈದರಾಬಾದ್: ಮುಕ್ತ, ನ್ಯಾಯಸಮ್ಮತ, ಪಾರದರ್ಶಕ ಮತ್ತು ಆಮಿಷ ಮುಕ್ತ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಂಪೂರ್ಣ ಬದ್ಧವಾಗಿದೆ. ಹಣ, ಉಚಿತ ಕೊಡುಗೆಗಳ ಮೇಲೆ ನಿಗಾ ಇರಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಗುರುವಾರ ಹೇಳಿದ್ದಾರೆ.

ತೆಲಂಗಾಣದಲ್ಲಿ ಚುನಾವಣಾ ಸಿದ್ಧತೆಗಳ ಬಗ್ಗೆ ಪರಿಶೀಲಿಸಲು ಸಿಇಸಿ ನೇತೃತ್ವದ 17 ಸದಸ್ಯರ ತಂಡ ನಗರದಲ್ಲಿದೆ.
ರಾಜೀವ್ ಕುಮಾರ್ ಮಾತನಾಡಿ, ಚುನಾವಣೆ ಸಮಯದಲ್ಲಿ ಹಣ ಬಳಕೆ ವಿರುದ್ಧ ಕಟ್ಟುನಿಟ್ಟಾಗಿ ಕಾರ್ಯನಿರ್ವಹಿಸಲು ಜಾರಿ ಸಂಸ್ಥೆಗಳಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ. ಹಣ, ಉಚಿತ ಕೊಡುಗೆಗಳ ಮೇಲೆ ನಿಗಾ ಇರಿಸಲಾಗುವುದು. ಅವರು (ಜಾರಿ ಸಂಸ್ಥೆಗಳು) ಕ್ರಮ ಕೈಗೊಳ್ಳದಿದ್ದರೆ ನಾವು ಅವರನ್ನು ಕ್ರಮ ಕೈಗೊಳ್ಳುವಂತೆ ಮಾಡುತ್ತೇವೆ. ಆನ್‌ಲೈನ್ ನಗದು ವರ್ಗಾವಣೆಯ ಮೇಲೆ ನಿಗಾ ಇಡಲು ಬ್ಯಾಂಕ್‌ಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಆಮಿಷ ಮುಕ್ತ ಚುನಾವಣೆ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿವೆ. ತೆಲಂಗಾಣದಲ್ಲಿ ಒಟ್ಟು 3.17 ಕೋಟಿ ಮತದಾರರಿದ್ದು, ಪುರುಷರು ಮತ್ತು ಮಹಿಳೆಯರು ಸಮಾನ ಸಂಖ್ಯೆಯಲ್ಲಿದ್ದಾರೆ. ರಾಜ್ಯದಲ್ಲಿ ಮೊದಲ ಬಾರಿಗೆ 80 ವರ್ಷಕ್ಕಿಂತ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅವರು ಬಯಸಿದರೆ ತಮ್ಮ ಮನೆಯಿಂದಲೇ ಮತ ಚಲಾಯಿಸುವ ಸೌಲಭ್ಯ ಕಲ್ಲಿಸಲಾಗಿದೆ. ಅದೇ ರೀತಿ ಅಂಗವಿಕಲರು ಮನೆಯಿಂದಲೇ ಮತ ಚಲಾಯಿಸಬಹುದು ಎಂದರು.