ಜೆರುಸಲೇಂ: ಅಮೆರಿಕದ ಅಧ್ಯಕ್ಷ ಜೋ ಬೈಡನ್ ಬೆನ್ನಲ್ಲೇ ಇಸ್ರೇಲ್‌ಗೆ ಭೇಟಿ ಕೊಟ್ಟಿರುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಅಲ್ಲಿನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಜೊತೆ ಗೋಪ್ಯ ಚರ್ಚೆ ನಡೆಸಿದ್ದಾರೆ. ಈ ಕುರಿತು ಇಸ್ರೇಲ್‌ನ ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಇಸ್ರೇಲ್‌ಗೆ ಬ್ರಿಟನ್ ಬೆಂಬಲ...
ಈ ಮಧ್ಯೆ ಹಮಾಸ್ ಬಂಡುಕೋರರ ವಿರುದ್ಧದ ಯುದ್ಧದಲ್ಲಿ ಇಸ್ರೇಲ್‌ಗೆ ಬೆಂಬಲ ನೀಡುವುದಾಗಿ ಬ್ರಿಟನ್ ಪ್ರಧಾನಿ ರಿಷಿ ಸುನಕ್ ತಿಳಿಸಿದ್ದಾರೆ.
ಅದೇ ವೇಳೆ ಗಾಜಾದ ನಾಗರಿಕರಿಗೆ ಮಾನವೀಯ ನೆರವು ಒದಗಿಸುವುದೂ ಮುಖ್ಯ ಎಂದು ಅವರು ಒತ್ತಿ ಹೇಳಿದ್ದಾರೆ.
ಇಸ್ರೇಲ್‌ಗೆ ಆತ್ಮರಕ್ಷಣೆ ಮಾಡುವ ಹಕ್ಕಿದ್ದು, ದೇಶದ ಭದ್ರತೆಯನ್ನು ಕಾಪಾಡಲು ಮತ್ತು ಒತ್ತೆಯಾಳುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ನಾವು ಬೆಂಬಲ ನೀಡುತ್ತೇವೆ ಎಂದು ಹೇಳಿದ್ದಾರೆ.
ಹಮಾಸ್ ಕ್ರೂರತನಕ್ಕೆ ಪ್ಯಾಲೆಸ್ಟೀನ್‌ಯನ್ನರು ಸಹ ಬಲಿಪಶುಗಳಾಗಿದ್ದಾರೆ. ಈ ನಿಟ್ಟಿನಲ್ಲಿ ಮಾನವೀಯ ನೆರವು ನೀಡುವುದು ಮುಖ್ಯವೆನಿಸುತ್ತದೆ ಎಂದು ಅವರು ತಿಳಿಸಿದ್ದಾರೆ.