ನವದೆಹಲಿ: ಸುದ್ದಿ ಪೋರ್ಟಲ್ 'ನ್ಯೂಸ್‌ಕ್ಲಿಕ್'ನ ಸಂಸ್ಥಾಪಕ ಪ್ರಬೀರ್ ಪುರಕಾಯಸ್ಥ ಮತ್ತು ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್ ಚಕ್ರವರ್ತಿ ಅವರು, ತಮ್ಮ ಬಂಧನ ವಿಚಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ದೆಹಲಿ ಹೈಕೋರ್ಟ್ ವಿರುದ್ಧ ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಅರ್ಜಿಯ ತುರ್ತು ವಿಚಾರಣೆಗೆ ಕೋರಿ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ.ಪಾರ್ದೀವಾಲಾ, ಮನೋಜ್ ಮಿಶ್ರಾ ಅವರನ್ನು ಒಳಗೊಂಡ ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದ್ದಾರೆ.
ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಬಂಧಿಸಿರುವುದು ಮತ್ತು ಏಳು ದಿನಗಳ ಪೊಲೀಸ್ ಕಸ್ಟಡಿಯನ್ನು ಪ್ರಶ್ನಿಸಿ ಪುರಕಾಯಸ್ಥ ಮತ್ತು ಚಕ್ರವರ್ತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಮಧ್ಯಂತರ ಪರಿಹಾರವಾಗಿ ತಕ್ಷಣ ಬಿಡುಗಡೆ ಮಾಡುವಂತೆ ಕೋರಿದ್ದರು. ಆದರೆ, ಹೈಕೋರ್ಟ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿತ್ತು.
ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಹಾಗೂ ದೇಶದ ವಿರುದ್ಧ ಅವಿಶ್ವಾಸ ಮೂಡಿಸಲು ಚೀನಾದಿಂದ ಭಾರಿ ಪ್ರಮಾಣದಲ್ಲಿ ಹಣ ಪಡೆಯಲಾಗಿದೆ ಎಂಬ ಆರೋಪದ ಮೇಲೆ ಇಬ್ಬರನ್ನೂ ಅಕ್ಟೋಬರ್ 3ರಂದು ಬಂಧಿಸಲಾಗಿದೆ.