ನವದೆಹಲಿ (PTI): ದೇಶದಲ್ಲಿ ಪ್ರತಿ ದಿನ ಮೆಟ್ರೊ ರೈಲಿನಲ್ಲಿ ಒಂದು ಕೋಟಿ ಜನರು ಪ್ರಯಾಣಿಸುತ್ತಿದ್ದಾರೆ. ಭವಿಷ್ಯದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗಬಹುದು ಎಂದು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಶುಕ್ರವಾರ ತಿಳಿಸಿದರು.

ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಇಲ್ಲಿ ಆಯೋಜಿಸಿರುವ ಮೂರು ದಿನಗಳ 16ನೇ ಅರ್ಬನ್ ಮೊಬಿಲಿಟಿ ಇಂಡಿಯಾ ಸಮ್ಮೇಳನ ಮತ್ತು ಪ್ರದರ್ಶನದಲ್ಲಿ ಅವರು ಮಾತನಾಡಿದರು.
ಸದ್ಯ, ದೇಶದ 20 ನಗರಗಳಲ್ಲಿ ಸುಮಾರು 895 ಕಿಲೊಮೀಟರ್‌ಗಳಲ್ಲಿ ಮೆಟ್ರೊ ಸಂಚಾರ ವ್ಯವಸ್ಥೆ ಕಾರ್ಯಾಚರಣೆ ನಡೆಸುತ್ತಿದೆ. ಮುಂದಿನ ಕೆಲವು ವರ್ಷಗಳಲ್ಲಿ ಇದು ವಿಶ್ವದ ಎರಡನೇ ಅತಿದೊಡ್ಡ ಮೆಟ್ರೊ ಸಂಚಾರದ ಜಾಲವಾಗಿ ಬೆಳೆಯಲಿದೆ ಎಂದು ಅವರು ಹೇಳಿದರು.